ಸವಾಲು ಎದುರಿಸಲು ಕನ್ನಡ ಶಕ್ತವಾಗಲಿ
ಶಿಗ್ಗಾಂವಿ: ಕನ್ನಡನಾಡು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಆದರೆ ಕನ್ನಡವು ಅನ್ಯಭಾಷೆ, ಸಂಸ್ಕೃತಿಗಳು ಒಡ್ಡುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಇನ್ನೂ ಶಕ್ತವಾಗಬೇಕು ಎಂದು ಖ್ಯಾತ ಕಥೆಗಾರ ಪ್ರೊ. ಕರೀಗೌಡ ಬೀಚನಹಳ್ಳಿ ಅಭಿಪ್ರಾಯಪಟ್ಟರು.
ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಡುಮನೆ ಸಭಾಂಗಣದಲ್ಲಿ ಆಯೋಜಿಸಿದ್ದ 58ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ವಿಶೇಷ ಉಪನ್ಯಾಸ ನೀಡಿದ ಬೀಚನಹಳ್ಳಿ, ಕನ್ನಡ ಭಾಷೆಯನ್ನು ಉಳಿಸುವುದಕ್ಕೆ ವಿಧಾನಸೌಧದಿಂದ ನೋಡುವ ಕ್ರಮ ಸರಿಯಲ್ಲ. ಈ ನೆಲದ ಹಳ್ಳಿಗರ, ದಲಿತರ, ನೊಂದವರಲ್ಲಿ ಕನ್ನಡ ಉಳಿದಿದೆ. ಅವರ ಮೂಲಕ ಕನ್ನಡವನ್ನು ಉಳಿಸುವ ಆಲೋಚನೆ ಮಾಡಬೇಕಾಗಿದೆ. ಕನ್ನಡ, ಕನ್ನಡತ್ವ ಎನ್ನುವುದು ನಮ್ಮ ಅಸ್ತಿತ್ವದ ಕುರುಹು. ಜಾಗತೀಕರಣದ ಪ್ರಭಾವದಿಂದಾಗಿ ಇಂಗ್ಲಿಷ್ ಭಾಷೆ ಇಡೀ ಜಗತ್ತನ್ನು ಆಕ್ರಮಿಸಿಕೊಳ್ಳುತ್ತಿದೆ. ಸಮರ್ಥ ಅಭಿವ್ಯಕ್ತಿ ಮಾತೃಭಾಷೆಯಿಂದ ಮಾತ್ರ ಸಾಧ್ಯ ಎನ್ನುವ ಸತ್ಯ ಗೊತ್ತಿದ್ದರೂ ಕನ್ನಡ ಶಾಲೆಗಳು ದಯನೀಯ ಸ್ಥಿತಿಯಲ್ಲಿರುವುದು ವಿಷಾದನೀಯ. ಕನ್ನಡ ಶಾಲೆಗಳಿಗೆ ಆದ್ಯತೆ ನೀಡಬೇಕು. ಕನ್ನಡವನ್ನು ಅನ್ನದ ಭಾಷೆಯನ್ನಾಗಿ ಪರಿವರ್ತಿಸಿದರೆ ಮಾತ್ರ ಭಾಷೆ ಉಳಿಯುತ್ತದೆ ಎಂದು ಪ್ರತಿಪಾದಿಸಿದರು.
ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಅಧ್ಯಕ್ಷತೆ ವಹಿಸಿ, ನಾಡು-ನುಡಿ, ನೆಲ-ಜಲ, ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ-ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಇಂಗ್ಲಿಷ್ನ ಪ್ರಭಾವದಿಂದ ಕನ್ನಡದ ಮಹತ್ವ ಕಡಿಮೆಯಾಗುತ್ತಿದೆ. ದೇಸೀ ಭಾಷೆ, ಜ್ಞಾನ ಪರಂಪರೆಯನ್ನು ಸಂರಕ್ಷಿಸಿಕೊಳ್ಳುವುದು ಅಗತ್ಯ. ಇದು ಜಾನಪದದಿಂದ ಹೆಚ್ಚು ಸಾಧ್ಯವೆಂದು ತಿಳಿಸಿದರು.
ಕನ್ನಡಾಂಬೆ ಶ್ರೀ ಭುವನೇಶ್ವರಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೊ. ಕರಿಗೌಡ ಬೀಚನಹಳ್ಳಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕುಲಸಚಿವ ಪ್ರೊ. ಡಿ.ಬಿ. ನಾಯಕ ಪ್ರಾಸ್ತಾವಿಕ ಮಾತನಾಡಿದರು. ಮೌಲ್ಯಮಾಪನ ಕುಲಸಚಿವ ಪ್ರೊ. ಸ.ಚಿ. ರಮೇಶ ಇದ್ದರು. ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿ ವಿಜಯಲಕ್ಷ್ಮೀ ಗೇಟಿಯವರ ನಿರೂಪಿಸಿದರು. ಕ್ಷೇತ್ರಸಹಾಯಕ ಎಚ್.ಕೆ. ಅರುಣಕುಮಾರ್ ವಂದಿಸಿದರು.
ಹಿರಿಯ ಸಂಶೋಧನಾ ಅಧಿಕಾರಿ ಡಾ. ಕೆ. ಪ್ರೇಮಕುಮಾರ, ಪ್ರಾಧ್ಯಾಪಕರಾದ ಪ್ರೊ. ಎಂ. ಚಂದ್ರ ಪೂಜಾರಿ ಇದ್ದರು.
ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಎಂ.ಬಿ. ಮಾರ್ಗದರ್ಶನ ಹಾಗೂ ಬಸವರಾಜ ಶಿಗ್ಗಾಂವಿ, ಹಾಲೇಶ್ ಗುಂಗೇರ, ಗುರುನಾಥ ಹುಬ್ಬಳ್ಳಿ ಸಂಯೋಜನೆಯಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

