ವೈಜ್ಞಾನಿಕ ಬೆಲೆ: ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ನವಲಗುಂದ, ನ. 6
ಗೋವಿನಜೋಳ ಮತ್ತು ಹತ್ತಿಗೆ ಈಗಿರುವ ಬೆಲೆ ಅವೈಜ್ಞಾನಿಕವಾಗಿದ್ದು, ತಕ್ಷಣ ಬೆಲೆ ಪರಿಷ್ಕರಣೆ ಮಾಡಿ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬಿಜೆಪಿ ತಾಲೂಕು ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಬೆಳೆ ಸಾಲ ಮನ್ನಾದ ಬಾಕಿ ಹಣವನ್ನು ಬೇಗನೆ ಬಿಡುಗಡೆ ಮಾಡಬೇಕು.
ಎಪಿಎಲ್ ಕಾರ್ಡ್ದಾರರಿಗೆ ವಿತರಿಸುತ್ತಿದ್ದ ಪಡಿತರವನ್ನು ಪುನಃ ಪ್ರಾರಂಭಿಸಬೇಕು, ಶಾದಿಭಾಗ್ಯ ಯೋಜನೆ ರಾಜ್ಯದ ಎಲ್ಲ ಬಡ ವರ್ಗದ ಜನರಿಗೂ ತಲುಪುವಂತಾಗಬೇಕು, ಕೇಂದ್ರ ಸರ್ಕಾರ ಈರುಳ್ಳಿ ರಪ್ತು ತಡೆ ಹಿಡಿದ ಕಾರಣ ಈರುಳ್ಳಿ ದರ ನೆಲಕಚ್ಚಿ ರೈತರಿಗೆ ತುಂಬಲಾರದ ನಷ್ಟ ಉಂಟಾಗಿದೆ. ಕೂಡಲೆ ರಪ್ತು ತಡೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿದರು.
ಈ ಬೇಡಿಕೆಗಳು ಈಡೇರದಿದ್ದರೆ ಮುಂಬರುವ ದಿನದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದೆಂದು ಮನವಿಪತ್ರದಲ್ಲಿ ಎಚ್ಚರಿಸಿದ್ದಾರೆ.
ತಾಲೂಕು ಬಿಜೆಪಿ ಅಧ್ಯಕ್ಷ ಎ.ಬಿ. ಹಿರೇಮಠ, ಎಂ.ಬಿ. ಮುನೇನಕೊಪ್ಪ, ಶಂಕ್ರಣ್ಣ ಅವರಾದಿ, ಸಿದ್ದಣ್ಣ ಕಿಟಗೇರಿ, ಬಸಣ್ಣ ಬೆಳವಣಕಿ, ತಾಪಂ ಅಧ್ಯಕ್ಷ ಪ್ರಕಾಶ ಪಟ್ಟಣಶೆಟ್ಟಿ, ಎಸ್.ಬಿ. ದಾನಪ್ಪಗೌಡರ, ನಾಗನಗೌಡ ಪಾಟೀಲ, ಅಣ್ಣಿಗೇರಿ ಎಪಿಎಂಸಿ ಅಧ್ಯಕ್ಷ ಎ.ಎಸ್. ಬಾಗಿ, ಜಿಪಂ ಸದಸ್ಯೆ ಶಾಂತಾ ನಿಡವಣಿ, ತಾಪಂ, ಪುರಸಭೆಯ ಬಿಜೆಪಿ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

