ಧಾರವಾಡ

ಶಾದಿಭಾಗ್ಯ ವಿಸ್ತರಣೆಗೆ ಆಗ್ರಹಿಸಿ ಕೆಜೆಪಿ ಧರಣಿ

Published On :

ಹುಬ್ಬಳ್ಳಿ: ಸರ್ಕಾರ ಅಲ್ಪಸಂಖ್ಯಾತರಿಗಾಗಿ ಜಾರಿ ಮಾಡಿರುವ ಶಾದಿಭಾಗ್ಯ ಯೋಜನೆಯನ್ನು ಎಲ್ಲ ಬಡ ವರ್ಗಗಳ ಯುವತಿಯರಿಗೂ ವಿಸ್ತರಿಸಬೇಕು ಎಂದು ಸೋಮವಾರ ಕೆಜೆಪಿ ಕಾರ್ಯಕರ್ತರು ತಹಸೀಲ್ದಾರ ಕಚೇರಿ ಎದುರು ಧರಣಿ ನಡೆಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಶಾದಿಭಾಗ್ಯ ಯೋಜನೆಯನ್ನು ಎಲ್ಲ ವರ್ಗಗಳ ಯುವತಿಯರಿಗೆ ವಿಸ್ತರಿಸಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಒಂದು ವಾರದಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಾದಿಭಾಗ್ಯ ಯೋಜನೆಗೆ ಪಕ್ಷದ ವಿರೋಧವಿಲ್ಲ. ಆದರೆ, ಯೋಜನೆಯನ್ನು ಎಲ್ಲ ವರ್ಗಗಳಿಗೂ ವಿಸ್ತರಿಸಬೇಕು ಎನ್ನುವುದು ಬೇಡಿಕೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಎಪಿಎಲ್ ಪಡಿತರದಾರರಿಗೆ ನೀಡುತ್ತಿದ್ದ ಪಡಿತರ ಧಾನ್ಯವನ್ನು ಸರ್ಕಾರ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಕುಟುಂಬಗಳಿಗೆ ಪಡಿತರ ಧಾನ್ಯ ದೊರೆಯುತ್ತಿಲ್ಲ. ಸರ್ಕಾರ ಒಂದು ವೇಳೆ ಪಕ್ಷದ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಅಶೋಕ ಕಾಟವೆ, ಹೂವಪ್ಪ ದಾಯಗೊಡಿ, ಮಂಜುನಾಥ ಲೂತಿಮಠ, ಆರ್.ಎಸ್. ಪಾಟೀಲ, ಶಂಕರಪ್ಪ ಬಿಜವಾಡ, ರವಿ ಕೊಪ್ಪಳ, ಎಚ್.ಟಿ. ದೊಂಗಡಿ ಸೇರಿದಂತೆ ಇನ್ನಿತರರು ಇದ್ದರು.
--
ಕುಂದಗೋಳ: ಕೆಜೆಪಿ ಧರಣಿ
ಕುಂದಗೋಳ: ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಮಾತ್ರ ಶಾದಿಭಾಗ್ಯ ಯೋಜನೆ ಜಾರಿ ಮಾಡಿದ್ದನ್ನು ಎಲ್ಲ ಸಮುದಾಯದ ಬಡ ಜನರಿಗೆ ಆರಂಭಿಸಬೇಕೆಂದು ಕೆಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ ತಹಸೀಲ್ದಾರ್ ಎಚ್.ಎಂ. ಓಲೇಕಾರಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ಗಂಗಾಧರ ಧರೆಣ್ಣವರ, ಆರ್.ಎನ್. ಪಾಟೀಲ ಇನ್ನಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.