ಅಭಿವೃದ್ಧಿಗೆ ರಾಜಕಾರಣ ಬೇಡ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ನುಸುಳುತ್ತಿರುವುದು ಬೇಸರದ ಸಂಗತಿ. ಹುಬ್ಬಳ್ಳಿ-ಧಾರವಾಡವಲ್ಲದೇ ಸಮಗ್ರ ರಾಜ್ಯ, ದೇಶ ಅಭಿವೃದ್ಧಿಯಾಗಬೇಕಾದರೆ ರಾಜಕಾರಣ ಬದಿಗೊತ್ತಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಹು-ಧಾ ಸೆಂಟ್ರಲ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ. 40ರಲ್ಲಿಯ ವಿವಿಧ ಬಡಾವಣೆಯಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಅವರು, ನಾವಿರುವ ವಾರ್ಡ್, ನಗರವನ್ನು ಮಾದರಿಯಾಗಿಸಲು ಎಲ್ಲರೂ ಕೈಜೋಡಿಸಬೇಕು. ಅಭಿವೃದ್ಧಿಯ ವಿಷಯ ಬಂದಾಗ ಎಲ್ಲರೂ ಒಂದಾಗಬೇಕು. ಅಂದಾಗ ಮಾತ್ರ ರಾಮರಾಜ್ಯದ ಕನಸು ನನಸಾಗಲು ಸಾಧ್ಯ ಎಂದರು.
ಪ್ರಸ್ತುತ ವಾರ್ಡ್ ನಂ. 40ರಲ್ಲಿ ಒಂದು ಕೋಟಿ ರುಪಾಯಿ ಹೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮಳೆ ಇನ್ನಿತರ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿತ್ತು. ಆದರೀಗ ಕಾಮಗಾರಿ ಶೀಘ್ರ ಗತಿಯಲ್ಲಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶೆಟ್ಟರ್ ತಿಳಿಸಿದರು.
ವಾರ್ಡ್ ನಂ. 40 ಜಯಪ್ರಕಾಶ ನಗರ, ಪದ್ಮರಾಜ ನಗರ, ಚವ್ಹಾಣ ಪ್ಲಾಟ್, ರಾಜೇಂದ್ರ ಕಾಲೋನಿ, ಶಿವಾಜಿ ಲೇಔಟ್, ಬ್ಯಾಂಕರ್ಸ್ ಕಾಲೋನಿ, ಜಗದೀಶ ನಗರ, ಪ್ರಶಾಂತ ನಗರ ಸೇರಿದಂತೆ ಇನ್ನಿತರ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶೆಟ್ಟರ್ ಚಾಲನೆ ನೀಡಿದರು. ಇದೇ ವೇಳೆ ಮುಕ್ಕಂದ ನಗರದ ಆಟದ ಮೈದಾನದಲ್ಲಿ ಹೈಮಾಸ್ಕ್ ದೀಪ ಅಳವಡಿಸುವ ಕಾಮಗಾರಿಗೆ ಪೂಜೆ ಸಲ್ಲಿಸಿದರು.
ಶಾಸಕ ಪ್ರಸಾದ ಅಬ್ಬಯ್ಯ, ರಾಜಶೇಖರ ಮೆಣಸಿನಕಾಯಿ, ಪ್ರಕಾಶ ಕ್ಯಾರಕಟ್ಟಿ, ರಾಘವೇಂದ್ರ ರಾಮದುರ್ಗ, ಡಾ. ಪಾಂಡುರಂಗ ಪಾಟೀಲ, ನಾಗೋಸಾ ಕಲಬುರ್ಗಿ, ಭೀರಪ್ಪ ಖಂಡೇಕರ, ಲಕ್ಷ್ಮಣ ಬೀಳಗಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

