ಗ್ರಾಮಾಭಿವೃದ್ಧಿಗೆ ಗ್ರಾಮಸ್ಥರಲ್ಲಿ ಒಗ್ಗಟ್ಟು ಅಗತ್ಯ
ಧಾರವಾಡ: ಗ್ರಾಮದ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕು ಎಂದರೆ ಗ್ರಾಮಸ್ಥರಲ್ಲಿ ಒಗ್ಗಟ್ಟಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಕಲಘಟಗಿ ತಾಲೂಕಿನ ದುಮ್ಮವಾಡದಲ್ಲಿ ಸುವರ್ಣ ಗ್ರಾಮ ಯೋಜನೆಯ ಕಾಮಗಾರಿ, ಡಾ. ಜಗಜೀವನರಾಂ ಸಮುದಾಯ ಭವನಕ್ಕೆ ಭೂಮಿಪೂಜೆ ಮತ್ತು ಗ್ರಾಪಂ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ದುಮ್ಮವಾಡ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸುವರ್ಣ ಗ್ರಾಮ ಯೋಜನೆಯಡಿ ರು. 1.10 ಕೋಟಿ ವೆಚ್ಟ ಮಾಡಲಾಗುವುದು. ಕಾಂಕ್ರೀಟ್ ರಸ್ತೆಗೆ ರು. 81.50 ಲಕ್ಷ, ಗ್ರಂಥಾಲಯ ಕಟ್ಟಡಕ್ಕೆ ರು. 8.50 ಲಕ್ಷ ಮತ್ತು ಬೀದಿ ದೀಪ ಹಾಗೂ ಚರಂಡಿ ನಿರ್ಮಾಣಕ್ಕೆ ರು. 20 ಲಕ್ಷ ವೆಚ್ಚದ ಕ್ರಿಯಾ ಯೋಜನೆ ಸಿದ್ಧವಾಗಿದೆ. ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಗುಣಮಟ್ಟದ ಕಾಮಗಾರಿ ನಿರ್ಮಿಸಲು ಸಹಕರಿಸಬೇಕೆಂದು ಹೇಳಿದರು.
ಗ್ರಾಪಂ ಅಧ್ಯಕ್ಷ ದ್ಯಾಮಪ್ಪ ಮುನವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಕಸ್ತೂರಿ ಧಾರವಾಡ, ಕಲಘಟಗಿ ತಾಪಂ ಅಧ್ಯಕ್ಷ ಎಂ. ಜಾವೂರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆರ್. ವೀರಾಪುರ, ಸಮಾಜ ಕಲ್ಯಾಣ ಅಧಿಕಾರಿ ಅಶೋಕ ಚಲವಾದಿ, ಪಿಡಿಓ ಜಗದೀಶ ಡಿ.ಬಿ. ಇದ್ದರು. ಆಸ್ತಕಟ್ಟಿಯ ಶಿವಯೋಗ ಆಶ್ರಮದ ವೀರೇಶ ದೇವರು ಸಾನಿಧ್ಯ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

