ನಗರೋತ್ಥಾನ ಕಾಮಗಾರಿ ಪರಿಶೀಲನೆ
ಧಾರವಾಡ: ನಗರೋತ್ಥಾನ ಯೋಜನೆಯಡಿ ಹು-ಧಾ ಅವಳಿ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪರಿಶೀಲಿಸಿದರು.
ಕಳೆದ 15 ದಿನಗಳ ಹಿಂದೆ ಜರುಗಿದ ಸಭೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನೀಡಿರುವ ಸೂಚನೆಗಳು ಅನುಷ್ಠಾನಗೊಂಡಿರುವುದನ್ನು ಸಭೆಯಲ್ಲಿ ಪರಿಶೀಲಿಸಿದರು. ಅಧಿಕಾರಿಗಳು ಸಿದ್ಧಗೊಳಿಸಿದ ರಸ್ತೆ ಕಾಮಗಾರಿಗಳ ಪಟ್ಟಿ ಪರಿಶೀಲಿಸಿ, ರಸ್ತೆ ಕಾಮಗಾರಿಗಳನ್ನು ಆದ್ಯತಾನುಸಾರ ಪಟ್ಟಿ ಮಾಡಬೇಕೆಂದು ಸೂಚಿಸಿದರು. ಅವಳಿ ನಗರಗಳ ಮೂರು ಕಾಮಗಾರಿ ವಿಭಾಗಗಳಲ್ಲಿ 22 ಕಿ.ಮೀ. ನಷ್ಟು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ತುರ್ತು ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು. ನ. 16ರಂದು ಹುಬ್ಬಳ್ಳಿ ಹಾಗೂ ಭಾನುವಾರ ಧಾರವಾಡದಲ್ಲಿ ಆಯಾ ಕ್ಷೇತ್ರದ ಶಾಸಕರೊಂದಿಗೆ ರಸ್ತೆಗಳ ಸ್ಥಿತಿಗತಿಯನ್ನು ಖುದ್ದಾಗಿ ಪರಿಶೀಲಿಸುತ್ತೇನೆಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಮೀರ್ ಶುಕ್ಲ, ಪಾಲಿಕೆ ಜಂಟಿ ಆಯುಕ್ತ ವೀರೇಂದ್ರ ಕುಂದಗೋಳ, ಅಧೀಕ್ಷಕ ಅಭಿಯಂತ ಗರಗ, ಜಿಲ್ಲಾ ನಗರಾಭಿನವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಆಯೇಶಾ ಪರ್ವಿನ್ ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

