ಯುವತಿ ನಾಪತ್ತೆ
ಹುಬ್ಬಳ್ಳಿ: ಇಲ್ಲಿನ ಅರಳಿಕಟ್ಟಿ ಓಣಿಯ ಯುವತಿಯೊಬ್ಬಳು ಕಾಣೆಯಾದ ಬಗ್ಗೆ ಘಂಟಿಕೇರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಅರಳಿಕಟ್ಟಿ ಓಣಿ ಶಿಲ್ಪಾ ಚಂದ್ರಹಾಸ ರೇವಣಕರ್ (22) ಕೆಲ ದಿನಗಳ ಹಿಂದೆ ಬೆಳಗಿನ ಜಾವ ಮನೆಯಲ್ಲಿ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ಯುವತಿ ತಂದೆ ಚಂದ್ರಹಾಸ ರೇವಣಕರ್ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಯುವತಿ ಅಪಹರಣ
ಕಲಘಟಗಿ: ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ 17 ವರ್ಷದ ಯುವತಿಯನ್ನು ಯವಕನೊಬ್ಬ ಅಪಹರಿಸಿಕೊಂಡು ಹೋದ ಪ್ರಕರಣ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಾಚಾಪುರ ಗ್ರಾಮದ ಶಂಕರ ಎನ್. ರಾಮನಕೊಪ್ಪ ಎಂಬುವನು ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿ ಸಹೋದರ ಚನ್ನಬಸಪ್ಪ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೊಡೆದಾಟ: ನಾಲ್ವರ ಸೆರೆ
ಕಲಘಟಗಿ: ತಾಲೂಕಿನ ಭೊಗೆನಾಗರಕೊಪ್ಪ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿಯ ಮುಂದೆ ಆಹಾರ ಧಾನ್ಯ, ಸೀಮೆ ಎಣೆ ವಿವಾದ ವಿಕೋಪಕ್ಕೆ ತಿರುಗಿ ಹೊಡೆದಾಟ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ ಪ್ರಕರಣ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಭಾನುವಾರ ಅಲ್ಲಾಸಾಬ್ ಫಕ್ರುಸಾಬ್ ಮಣ್ಣಮನಿ ಎನ್ನುವವರು 40 ಜನರ ವಿರುದ್ಧ ದೂರು ನೀಡಿದ್ದಾರೆ. ಪಿಎಸ್ಐ ಶಿವಾನಂದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಸಾಬ್ ಸಣ್ಣಮನಿ, ಶರೀಫ್ಸಾಬ ಸಣ್ಣಮನಿ, ಮಹಮ್ಮದ್ ಸಾಬ್ ಕುಸುಗಲ್, ರಸ್ತುಂಸಾಬ್ ಸಣ್ಣಮನಿ ಎಂಬುವರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

