ಧಾರವಾಡ

ಸರ್ಕಾರ ಜಮೀನು ನೀಡಿದ್ದಕ್ಕೆ ಸಂಭ್ರಮಾಚರಣೆ

Published On :

ಹುಬ್ಬಳ್ಳಿ: ಅಖಿಲ ಭಾರತೀಯ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ಗೆ ಸರ್ಕಾರ ಬೆಂಗಳೂರಿನ ನೆಲಮಂಗಲ ಬಳಿ ಐದು ಎಕರೆ ಜಮೀನು ನೀಡಿರುವುದನ್ನು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಸ್ವಾಗತಿಸಿದ್ದಾರೆ.
ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ಮಾತನಾಡಿದ ಬಸವಜಯ ಶ್ರೀಗಳು, ಸರ್ಕಾರ ನೀಡಿರುವ ಜಮೀನು ಪಂಚಮಸಾಲಿ ಸಮುದಾಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ. ಸರ್ಕಾರ ನೀಡಿರುವ ಜಮೀನಿನಲ್ಲಿ ವಿದ್ಯಾರ್ಥಿ ವಸತಿ ನಿಲಯ, ವೃತ್ತಿಪರ ಶಿಕ್ಷಣ ಕೇಂದ್ರ ಸೇರಿದಂತೆ ಉದ್ಯೋಗಾಧಾರಿತ ಶಿಕ್ಷಣ ಕೇಂದ್ರ ತೆರೆಯಲಾಗುವುದು ಎಂದು ಸ್ವಾಮೀಜಿ ಹೇಳಿದರು.
ಕೂಡಲಸಂಗಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಂದರ್ಭ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ಗೆ ಜಮೀನು ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ಮುತುವರ್ಜಿ ವಹಿಸಿ ಸರ್ಕಾರದಿಂದ ಟ್ರಸ್ಟ್‌ಗೆ ಜಮೀನು ನೀಡುವಂತೆ ಮಾಡಿದ್ದಾರೆ ಎಂದರು.
ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ ಅವರು, ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳ ಆಶೋತ್ತರ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ತೀರ್ಮಾನ ನಿಜಕ್ಕೂ ಶ್ಲಾಘನೀಯ ಎಂದರು.
ಸಂಭ್ರಮಾಚರಣೆಯಲ್ಲಿ ಶಿವಾನಂದ ಬೆಲ್ಲದ, ಎಂ.ಎಸ್. ಮಲ್ಲಾಪುರ, ನಂದಕುಮಾರ್ ಪಾಟೀಲ, ಶರಣಪ್ಪ ಜನಗಣ್ಣವರ, ಸಂಜಯ ಕಾಶಿಗಾರ, ಬಸವರಾಜ ಕಿತ್ತೂರ, ಕುಮಾರ ಕುಂದನಹಳ್ಳಿ, ಬಸವರಾಜ ಕೊರಿಕೊಪ್ಪ, ಶಿವಾನಂದ ಮಾಯಕರ್, ಚಂದ್ರಪ್ಪ ಉಣಕಲ್, ಮಹಾಂತೇಶ ಕಣವಿ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.