ನೇತ್ರ ಶಸ್ತ್ರಚಿಕಿತ್ಸೆ: ಜಿಲ್ಲೆ ರಾಜ್ಯಕ್ಕೆ ಮಾದರಿ
ಧಾರವಾಡ: ಧಾರವಾಡ ಜಿಲ್ಲೆ ಕಣ್ಣಿನ ಶಸ್ತ್ರಚಿಕಿತ್ಸೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದು, ಶೇ. 130ರಷ್ಟು ಗುರಿ ಸಾಧಿಸುವ ಮೂಲಕ ರಾಜ್ಯದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎನ್.ಎಂ. ಅಂಗಡಿ ಹೇಳಿದರು.
ತಾಲೂಕಿನ ನಿಗದಿ ಗ್ರಾಮದಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ಎಸ್ಡಿಎಂ ವೈದ್ಯಕೀಯ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ, ಯಶೋಧಾ ವೆಲಫೇರ್ ಟ್ರಸ್ಟ್ ಹಾಗೂ ಬಾಲನಂದನ ಟ್ರಸ್ಟ್, ನಿಗದಿ ಗ್ರಾಪಂ ಮತ್ತು ಲಯನ್ಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈವರೆಗೆ 13,600 ಕಣ್ಣಿನ ಶಸ್ತ್ರ ಚಿಕಿತ್ಸೆಗಳು ಯಶಸ್ವಿಯಾಗಿ ನಡೆದಿದ್ದು, ಇದಕ್ಕೆ ಜಿಲ್ಲೆಯ ಸಂಘ-ಸಂಸ್ಥೆಗಳ ಸಂಪೂರ್ಣ ಸಹಕಾರ ಕಾರಣ ಎಂದರು.
ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಅಧಿಕಾರಿ ಡಾ. ಸುನೀಲ ಗರಗ ಮಾತನಾಡಿ, ನೇತ್ರದಾನ ಮಹಾದಾನವಾಗಿದ್ದು, ಮಣ್ಣಲ್ಲಿ ಮಣ್ಣಾಗುವ ಬದಲಿಗೆ ಇಬ್ಬರ ಅಂಧರ ಬಾಳಿಗೆ ಬೆಳಕಾಗಬಹುದು. ನೇತ್ರದಾನ ಮಾಡಲು ಇಚ್ಛಿಸುವವರು ಟೋಲ್ ಫ್ರೀ ದೂರವಾಣಿ ಸಂಖ್ಯೆ 1053ಗೆ ಕರೆ ಮಾಡಿ, ನೇತ್ರದಾನದ ನೋಂದಣಿ ಮಾಡಿಸಿ ಎಂದು ಮನವಿ ಮಾಡಿದರು.
ಯಶೋಧಾ ವೆಲಫೇರ್ ಟ್ರಸ್ಟ್ನ ಡಿ.ಆರ್. ಅಗ್ನಿಹೋತ್ರಿ, ಗ್ರಾಪಂ ಅಧ್ಯಕ್ಷೆ ಶೆಟ್ಟವಾ ಹರಿಜನ, ಎಫ್ಪಿಎಐ ಖಜಾಂಚಿ ಪಾರ್ವತಿ ಹಾಲಭಾವಿ, ಬಾಲನಂದನ ಟ್ರಸ್ಟ್ ಅಧ್ಯಕ್ಷೆ ಪ್ರೀತಿ ಎನ್.ಕೆ., ಕಾರ್ಯದರ್ಶಿ ಶಂಕ್ರಮ್ಮ ಕಲಘಂಟಿ, ಎಸ್ಡಿಎಂ ಆಸ್ಪತ್ರೆ ವೈದ್ಯ ಡಾ. ಪ್ರಮೋದ ಇದ್ದರು. ಸುಜಾತ ಅನಿಶೆಟ್ಟರ ಮಾತನಾಡಿದರು. ನಿಂಗಪ್ಪ ಮಡಿವಾಳರ ನಿರೂಪಿಸಿದರು. ಉಮಾ ಹಂಪಣ್ಣವರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

