ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿರೋಧಿಸಿ ಪ್ರತಿಭಟನೆ
ಹುಬ್ಬಳ್ಳಿ: ಶಾದಿಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯಕ್ಕೆ ಅವಹೇಳನಕಾರಿಯಾಗುವಂತೆ ಮಾತನಾಡಿದ ಸ್ವಾಮಿ ಪ್ರಣವಾನಂದರ ಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಸ್ಟೇಶನ್ ರಸ್ತೆಯ ಡಾ. ಬಾಬಾಸಾಹೇಬ ಅಂಬೇಡ್ಕರ್ ವರ್ತುಳದಲ್ಲಿ ಸಂಜೆ ಪ್ರಣವಾನಂದ ಶ್ರೀಗಳ ಪ್ರತಿಕೃತಿ ದಹಿಸಿದ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಪ್ರಣವಾನಂದ ಶ್ರೀಗಳು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಶ್ರೀಗಳು ಹೇಳಿಕೆ ವಿರುದ್ಧ ಈಗಾಗಲೇ ಧಾರವಾಡದ ಅಂಜುಮನ್ ಸಂಸ್ಥೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಕ್ಷಣ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಸಮಾಜದ ಸ್ವಾಸ್ಥ್ಯ ಹದಗೆಡುವಂತಹ ಹೇಳಿಕೆ ನೀಡಿರುವ ಶ್ರೀಗಳು ಬಹಿರಂಗ ಕ್ಷಮೆಯಾಚಿಸಬೇಕು ಎಂದೂ ಅವರು ಆಗ್ರಹಿಸಿದರು.
ಮಹೇಶ ದಾಬಡೆ, ಯಲ್ಲಪ್ಪ ಮಣಕವಾಡ, ಕಾಳೂಸಿಂಗ್ ಚವ್ಹಾಣ, ಮೋಹನ ಹಿರೇಮನಿ, ಕುಮಾರ ಕುಂದನಹಳ್ಳಿ, ಬಾಬಾಜಾನ ಮುಧೋಳ, ಶಿಫಿ ಮುದ್ದೇಬಿಹಾಳ, ಯುಸೂಫ್ ಖೈರಾತಿ, ಮೆಹಮೂದ ಕೋಳೂರ, ಇಕ್ಬಾಲ್ ಚಿತ್ತೇವಾಲೆ, ಬಾಷಾಭಾಯಿ, ಆಸೀಫ್ ಬಳ್ಳಾರಿ, ಆರ್.ಐ. ಸಿಕಂದರ, ಇಸ್ಮಾಯಿಲ್ ನವಲೂರ, ಫರೀದ ಬೆಂಗಳೂರಿ, ದಾದಾಪೀರ ಬೇಪಾರಿ, ಎ.ಎ. ದೇಸಾಯಿ ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

