ಧಾರವಾಡ

ರೈತರಿಗೆ ತಾಂತ್ರಿಕ ಮಾಹಿತಿ ನೀಡಿ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ನ. 19
ವಿದ್ಯುನ್ಮಾನ ಮಾಧ್ಯಮದ ಮೂಲಕ ರೈತರಿಗೆ ತಾಂತ್ರಿಕ ಮಾಹಿತಿ ನೀಡಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಜೆ.ಎಚ್ . ಕುಲಕರ್ಣಿ ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯ, ಮತ್ತು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೃಷಿ ಇಲಾಖೆಯ ಕ್ಷೇತ್ರ  ಮಟ್ಟದ ವಿಸ್ತರಣಾ ಅಧಿಕಾರಿಗಳಿಗೆ ಸೋಮವಾರದಿಂದ ಹಮ್ಮಿಕೊಂಡಿದ್ದ 7 ದಿನಗಳ ಬುನಾದಿ ತರಬೇತಿ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ತಾಂತ್ರಿಕತೆಗಳ ಬಗ್ಗೆ, ಸೂಕ್ಷ್ಮ ಪೋಷಕಾಂಶಗಳ ಬಳಕೆ ಬಗ್ಗೆ ಹೆಚ್ಚಿನ ತರಬೇತಿಯ ಅವಶ್ಯಕತೆ ಇದೆ ಇಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿಸ್ತರಣಾ ನಿರ್ದೇಶಕ ಡಾ. ಎಂ.ಬಿ. ಚೆಟ್ಟಿ ಮಾತನಾಡಿ, 2014ರ ಮಾರ್ಚ್ 16ರವರೆಗೆ 690 ಅಧಿಕಾರಿಗಳಿಗೆ  ಒಟ್ಟು 20 ಸರಣಿ  ತರಬೇತಿಗಳನ್ನು ಆಯೋಜಿಸಲಾಗಿದೆ ಎಂದರು. ಡಾ. ಎಸ್.ಟಿ. ನಾಯಕ್ ಸ್ವಾಗತಿಸಿದರು. ಡಾ. ಎಸ್.ಡಿ. ಕೋಲೋಳಗಿ ನಿರೂಪಿಸಿದರು. ಡಾ. ಪಿ. ಎಸ್. ಹೂಗಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.