ಧಾರವಾಡ

ಅಕ್ರಮ ಮದ್ಯ ವಶ: 2 ಸೆರೆ

Published On :

ಹುಬ್ಬಳ್ಳಿ: ಅಕ್ರಮವಾಗಿ ಮಾರಲು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ರು. 6,500 ಮೌಲ್ಯದ 37 ಲೀ. ಮದ್ಯ ವಶಪಡಿಸಿಕೊಂಡ ಪೊಲೀಸರು, ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಬ್ಯಾಹಟ್ಟಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬ್ಯಾಹಟ್ಟಿಯ ಧರೆಪ್ಪ ಸಂಗಪ್ಪ ಹರಿಹರ ಮನೆ ಮೇಲೆ ದಾಳಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಶೇಷ ತನಿಖಾ ತಂಡ, ಬೀರ್, ವಿಸ್ಕಿ ಬಾಟಲಿಗಳನ್ನು ವಶಕ್ಕೆ ತೆಗೆದುಕೊಂಡಿದೆ. ಈತನಿಗೆ ಅಕ್ರಮವಾಗಿ ಮದ್ಯ ಪೂರೈಸುತ್ತಿದ್ದ ಆರೋಪದಡಿ ಹೆಬಸೂರಿನ ಶಿವಾಜಿ ಕಲಾಲನನ್ನು ಬಂಧಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಲೋಕೇಶಕುಮಾರ ಮಾರ್ಗದರ್ಶನದಲ್ಲಿ ಡಿಎಸ್ಪಿ ಅನಿಲ ಭೂಮರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿತ್ತು. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟಕಾ: ಓರ್ವನ ಸೆರೆ
ಧಾರವಾಡ:  ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತನಿಖಾ ತಂಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬಂಧಿಸಿದೆ.
ಧರೆಪ್ಪ ಉಪ್ಪಾರ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನಿಂದ ರು. 5,150 ನಗದು ಮತ್ತು ಮಟಕಾ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗ್ರಾಮದ ಸಮೀಪದ ಕೆರೆ ಬಳಿ ಮಟಕಾ ವ್ಯವಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ಪಿಎಸ್‌ಐ ಮುರಘೇಶ ಚನ್ನಣ್ಣವರ ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.