ಮಕ್ಕಳಿಂದ ಸಮಾಜ ಬದಲಾವಣೆ
ಕನ್ನಡಪ್ರಭ ವಾರ್ತೆ, ಧಾರವಾಡ, ನ. 21
ಮಕ್ಕಳ ಸಲಹೆ, ಸೂಚನೆಯಿಂದ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಹಾಗೂ ಗುಟ್ಕಾ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ. ಮಕ್ಕಳ ನೇರ ಹಾಗೂ ಸ್ಪಷ್ಟ ನುಡಿಯಿಂದ ಸಮಾಜದಲ್ಲಿ ಸಾಕಷ್ಟು ಬದಲಾವಣೆ ತರಲು ಸಾಧ್ಯ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.
ಇಲ್ಲಿನ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ವಿಶ್ವ ಮಕ್ಕಳ ಹಕ್ಕುಗಳ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ಕಾರು, ಮೋಟಾರು ಬೈಕ್, ಸೈಕಲ್ ಹಾಗೂ ಮ್ಯಾರಾಥಾನ್ ರ್ಯಾಲಿ ಹಾಗೂ ಮಹಿಳಾ ಮತ್ತು ಮಕ್ಕಳ ಸಾಗಾಟ ತಡೆ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಬಿ.ಡಿ. ಹಿರೇಮಠ ಮಕ್ಕಳ ಸಂಘ ಸಂಸ್ಥೆಗಳ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ, ನಮ್ಮ ದೇಶದಲ್ಲಿ ಅನೇಕ ಕಾನೂನುಗಳಿದ್ದರೂ ಅವುಗಳ ಸಮರ್ಪಕ ಅನುಷ್ಠಾನಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.
ಸಾಹಿತಿ ಮೋಹನ ನಾಗಮ್ಮನವರ ಮಕ್ಕಳ ತ್ರೈಮಾಸಿಕ ವರದಿ ಬಿಡುಗಡೆಗೊಳಿಸಿ, ಮಕ್ಕಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಹಕ್ಕುಗಳಿಗೆ ಚ್ಯುತಿಬಾರದ ರೀತಿಯಲ್ಲಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಬಿ. ಉಷಾ ಪ್ರಾಸ್ತಾವಿಕ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ, ಪೊಲೀಸ್ ಆಯುಕ್ತ ಬಿ. ಎ. ಪದ್ಮನಯನ, ಪ್ರೊಬೇಶನರಿ ಐಎಎಸ್ ಅಧಿಕಾರಿ ಚಾರುಲತಾ, ತಾಪಂ ಅಧ್ಯಕ್ಷೆ ಸುಮಂಗಲಾ ಕೌದೆಣ್ಣವರ, ಸದಸ್ಯೆ ನೀಲಮ್ಮ ತರಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ತ್ರಿಶೂಲಾ ಅಪ್ಪಣ್ಣವರ, ಡಿಡಿಪಿಐ ಡಾ. ಬಿ.ಕೆ.ಎಸ್. ವರ್ಧನ, ಜೀವವಿಮಾ ನಿಗಮದ ಧಾರವಾಡ, ವಿಭಾಗಾಧಿಕಾರಿ ಎಂ. ಜಗನ್ನಾಥ, ಎಸ್‌ಬಿಐ ವ್ಯವಸ್ಥಾಪಕಿ ಲಕ್ಷ್ಮಿ ಭಟ್, ಎಸಿಪಿ ಶಂಕರ ಹೊಳೆಹೊಸುರ, ಎಚ್.ಎಸ್. ಕೇರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

