ಲಾಡ್ ಕೈ ಬಿಟ್ಟರೆ ರಾಜಿನಾಮೆ
ಧಾರವಾಡ: ಸಂತೋಷ ಲಾಡ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದರೆ, ಕಲಘಟಗಿ ತಾಲೂಕು ವ್ಯಾಪ್ತಿಯ ಪಕ್ಷದ ಎಲ್ಲ ಜನಪ್ರತಿನಿಧಿಗಳು ರಾಜೀನಾಮೆ ನೀಡಲಿದ್ದಾರೆ ಎಂದು ತಾಪಂ ಸದಸ್ಯ ದೇವೇಂದ್ರಪ್ಪ ಕಾಳೆ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸರ್ಕಾರ ಹಾಗೂ ಸ್ವಂತ ಖರ್ಚಿನಲ್ಲಿ ಜನಪರ ಕಾರ್ಯಗಳನ್ನು ಲಾಡ್ ಮಾಡಿದ್ದಾರೆ. ಅವರು ತಮ್ಮ ಸ್ವಂತ ಖರ್ಚಿನಲ್ಲಿ ರೈತರಿಗೆ ಉಚಿತ ಕೊಳವೆ ಬಾವಿ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಡ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರ, ಕ್ಷೇತ್ರದ 1.60 ಸಾವಿರ ಮಂದಿಗೆ ವಿಮಾ ಯೋಜನೆ ಹೀಗೆ ಹತ್ತಾರು ಯೋಜನೆಗಳನ್ನು ರೂಪಿಸಿದ್ದಾರೆ.
ರಾಜ್ಯದ ಯಾವ ಸಚಿವರು ಹಾಗೂ ಶಾಸಕರು ತಮ್ಮ ಕ್ಷೇತ್ರದಲ್ಲಿ ಮಾಡದಂತಹ ಜನಪರ ಕಾರ್ಯಗಳನ್ನು ಸಚಿವ ಲಾಡ್ ಮಾಡಿದ್ದಾರೆ. ಜನಪರ ಚಿಂತನೆಯುಳ್ಳ ರಾಜಕಾರಣಿ ಮೇಲೆ ಅನವಶ್ಯಕ ಆರೋಪಗಳು ಬಂದಿದ್ದು, ಈ ಕಾರಣಕ್ಕೆ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವುದು ಉಚಿತವಲ್ಲ. ಕಳೆದ ಐದಾರು ತಿಂಗಳುಗಳಿಂದ ಸಮಾಜ ಪರಿವರ್ತನ ಸಮುದಾಯದ ಡಾ.ಎಸ್.ಆರ್. ಹಿರೇಮಠ, ಸಂತೋಷ ಲಾಡ್ ಅವರು ಸಚಿವರಾದ ನಂತರ ದಾಖಲೆ ಬಿಡುಗಡೆ ಮಾಡುತ್ತಿರುವುದು ಸಂಶಯಕ್ಕೆ ದಾರಿ ಮಾಡಿಕೊಟ್ಟಿದ್ದು, ರಾಜಕೀಯವಾಗಿ ಲಾಡ್ ಅವರನ್ನು ಹತ್ತಿಕ್ಕುವ ಪ್ರಯತ್ನವನ್ನು ಕೆಲ ಪಕ್ಷದ ಕೆಲ ಶಾಸಕರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಸೇರಿದಂತೆ ಪಕ್ಷದ ಹೈಕಮಾಂಡ್ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವ ಮೊದಲು ದಾಖಲೆಗಳನ್ನು ಪರಿಶೀಲಿಸಬೇಕು. ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಆರೋಪ ಸಾಬೀತಾಗಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವುದು ಸರಿಯಾದ ಕ್ರಮವಲ್ಲ ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ನಿಂಗಪ್ಪ ಬ್ಯಾಕೆಡ್ಕರ್, ತಾಪಂ ಸದಸ್ಯ ಸ್ನೇಹಾ ಕಿತ್ತೂರ, ಅನ್ವರ್ ಖಾನ್ ಬಾಗೆವಾಡಿ, ಮಾರುತಿ ಬಾಂಗಿಡಿ, ಸುಮಿತ್ರಾ ಮಾಂಗಜಿ, ಸುಭಾಸ ಮುಮ್ಮಿಗಟ್ಟಿ, ಮುರಗೇಶ ಇನಾಮಾದಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

