ಧಾರವಾಡ

ಚಂಪಾ ಕ್ಷಮೆಯಾಚನೆಗೆ ಒತ್ತಾಯ

Published On :

ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದ ಜಯ ಕರ್ನಾಟಕ ಸಂಘಟನೆಯ ಕಾರ್ಯಕ್ರಮದ ಸಂದರ್ಭದಲ್ಲಿ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ಅವರು ಸ್ಟೇಶನ್ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವಾಗ ಬೂಟು ಧರಿಸಿದ್ದನ್ನು ಸಮತಾ ಸೇನಾ ಖಂಡಿಸಿದೆ.
ಡಾ. ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿರುವ ಚಂದ್ರಶೇಖರ ಪಾಟೀಲ ಬಹಿರಂಗವಾಗಿ ಕ್ಷಮಾಪಣೆ ಕೇಳಬೇಕೆಂದು ಒತ್ತಾಯಿಸಿರುವ ಸೇನಾ ಕಾರ್ಯಕರ್ತರು, ಚಂದ್ರಶೇಖ ಪಾಟೀಲ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರನ್ನು ಆಗ್ರಹಿಸಿದ್ದಾರೆ.
ಸಮಾನ ಶಿಕ್ಷಣ ನೀತಿ ಸೇರಿದಂತೆ ವಿವಿಧ ಸಾಮಾಜಿಕ ಕಳಕಳಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಜಯ ಕರ್ನಾಟಕ ರ್ಯಾಲಿಯಲ್ಲಿ ಭಾಗವಹಿಸುವ ಮೂಲಕ ಚಂದ್ರಶೇಖರ ಪಾಟೀಲ ಅವರು ತೋರಿದ ಕಾಳಜಿಯನ್ನು ಸಮತಾ ಸೇನಾ ಗೌರವಿಸುತ್ತದೆ. ಆದರೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವಾಗ ಬೂಟ್ ತೆಗೆಯದಿರುವುದು ಖಂಡನೀಯ.  ಚಂದ್ರಶೇಖರ ಪಾಟೀಲ ಅವರ ವರ್ತನೆ ಖಂಡಿಸಿ ನ. 26ರಂದು ಬೆಳಗ್ಗೆ ಅಂಬೇಡ್ಕರ್ ಪುತ್ಥಳಿ ಬಳಿಯಿಂದ ಪ್ರತಿಭಟನೆ ನಡೆಸಿ, ಚಂಪಾ ಪ್ರತಿಕೃತಿ ದಹಿಸುವುದಾಗಿ ಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ, ಮಾರುತಿ ದೊಡ್ಡಮನಿ, ಮಂಜುನಾಥ ಸಣ್ಣಕ್ಕಿ ಮತ್ತಿತರರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.