ಧಾರವಾಡ

ಸುದ್ದಿ ಸಂಕ್ಷೇಪ

Published On :

ಕಿಮ್ಸ್‌ಗೆ  ವೈದ್ಯರನ್ನು ಕೊಡಿ: ವೀರಣ್ಣ ಮತ್ತಿಕಟ್ಟಿ ಸುವರ್ಣ ವಿಧಾನಸೌದ, ಬೆಳಗಾವಿ
ವಿಧಾನಪರಿಷತ್ತು: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವಂತೆ  ಕಾಂಗ್ರೆಸ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಆಗ್ರಹಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಕಿಮ್ಸ್‌ನಲ್ಲಿ 433 ವೈದ್ಯ ಹುದ್ದೆಗಳಿದ್ದು, 153  ಹುದ್ದೆಗಳು ಖಾಲಿ ಇವೆ. ಅದೇ ರೀತಿ 85 ಶುಶ್ರೂಶಕರ ಹುದ್ದೆಗಳು ಖಾಲಿ ಇವೆ. ಇದರಿಂದ ಜನತೆಗೆ ತೀವ್ರ ತೊಂದರೆಯಾಗಿದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ್, ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳೇ ಖಾಲಿ ಹುದ್ದೆಗಳ ಕೆಲಸ ನಿಭಾಯಿಸುತ್ತಿದ್ದಾರೆ. ಹುಬ್ಬಳ್ಳಿ ಪ್ರಮುಖ ನಗರವಾಗಿದ್ದು, ಅಲ್ಲಿನ ಕಿಮ್ಸ್‌ಗೆ ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇದೇ ವರ್ಷ ಕಿಮ್ಸ್‌ನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ರು. 4.5 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದರು.
ಮೆಡಿಕಲ್ ಕಾಲೇಜು ತಪ್ಪಿದ್ದೇಕೆ?: ಚಿತ್ರದುರ್ಗಕ್ಕೆ ಘೋಷಣೆಯಾಗಿದ್ದ ಮೆಡಿಕಲ್ ಕಾಲೇಜು ಕೈ ತಪ್ಪಿ ಗದಗ ಹಾಗೂ ಗುಲ್ಬರ್ಗಾ ಜಿಲ್ಲೆಗಳಿಗೆ ಹೋಗಿರುವ ವಿಷಯ ಸದನದಲ್ಲಿ ಚರ್ಚೆಗೆ ಬಂತು.
ಸದಸ್ಯ ರಘು ಆಚಾರ್ಯ ಈ ಕುರಿತು ಸರ್ಕಾರದ ಗಮನ ಸೆಳೆದರು.ಗದಗದಲ್ಲಿ ಸಚಿವ ಎಚ್.ಕೆ. ಪಾಟೀಲ್ ಪ್ರಭಾವ ಹಾಗೂ ಗುಲ್ಬರ್ಗಾದಲ್ಲಿ ಇನ್ನಾರದ್ದೋ ಪ್ರಭಾವದಿಂದಲೇ ನಮ್ಮ ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ತಪ್ಪಿ ಹೋಗಿದೆ. ಆಸೆ ತೋರಿಸಿ ಕೈ ಬಿಡುವುದು ಎಷ್ಟರ ಮಟ್ಟಿಗೆ ಸರಿ. ಇದು ಉದ್ದೇಶ ಪೂರ್ವಕವಾಗಿ ಮಾಡಿದ್ದು, ಸರ್ಕಾರ ಉತ್ತರಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಎಂ.ಸಿ. ನಾಣಯ್ಯ, ಬಜೆಟ್‌ನಲ್ಲಿ ಸಹ ಮೆಡಿಕಲ್ ಕಾಲೇಜನ್ನು ಚಿತ್ರದುರ್ಗಕ್ಕೆ ನೀಡುವುದಾಗಿ ಘೋಷಿಸಿ ಅನಂತರ ಕೈ ಬಿಟ್ಟಿರುವುದು ಸರಿಯಲ್ಲ ಎಂದರು. ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್, ಇದರಲ್ಲಿ ರಾಜಕೀಯವಿಲ್ಲ. ಹಂತ-ಹಂತವಾಗಿ ಎಲ್ಲ ಜಿಲ್ಲೆಗಳಿಗೂ ಮೆಡಿಕಲ್ ಕಾಲೇಜು ಕೊಡುತ್ತೇವೆ ಎಂದು ಹೇಳಿ ಸುಮ್ಮನಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.