ಧಾರವಾಡ

ಎಂಇಎಸ್ ಶಾಸಕರ ವರ್ತನೆ ವಿರೋಧಿಸಿ ಕರವೇ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ನ. 25
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿರುವ ಶಾಸಕರ ವರ್ತನೆ ಖಂಡಿಸಿ ಹಾಗೂ ಎಂಇಎಸ್ ಮಹಾಮೇಳಾವಕ್ಕೆ ನೀಡಿರುವ ಅನುಮತಿ ವಿರೋಧಿಸಿ ನಗರದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚೆನ್ನಮ್ಮ ವೃತ್ತದಲ್ಲಿ ಕೆಲ ಸಮಯ ರಸ್ತೆ ತಡೆಸಿದ ಪ್ರತಿಭಟನಾನಿರತ ಕರವೇ ಕಾರ್ಯಕರ್ತರು, ಎಂಇಎಸ್ ಪ್ರತಿಕೃತಿ ದಹಿಸಿದರು. ಮಹಾಮೇಳಾವಕ್ಕೆ ಅನುಮತಿ ನೀಡಿದ ಜಿಲ್ಲಾಡಳಿತದ ಕ್ರಮ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟಿಸುತ್ತಿದ್ದ ಕರವೇ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ, ಬಂಧಿಸಿದ್ದನ್ನು ವಿರೋಧಿಸಿದರು.
ಶಾಸಕರಾದ ಸಂಭಾಜಿ ಪಾಟೀಲ ಹಾಗೂ ಅರವಿಂದ ಪಾಟೀಲ ಅವರು ಕನ್ನಡದಲ್ಲಿ ಮಾತನಾಡಿದರೆ ಮಾತ್ರ ವಿಧಾನಸಭೆಯಲ್ಲಿ ಪ್ರವೇಶ ನೀಡಬೇಕು. ಎಂಇಎಸ್ ಸಂಘಟನೆ ಮೇಲೆ ನಿಷೇಧ ಹೇರಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಕರವೇ ಕಾರ್ಯಕರ್ತರಾದ ಹನಮಂತಪ್ಪ ಮೇಟಿ, ಬಸವರಾಜ ದೇವರಮನಿ, ಸಾಗರ ಗಾಯಕವಾಡ, ಶೀತಲ ಮಲಗಾವಿ, ಸುರೇಶ ಗೋಕಾಕ, ಈಶ್ವರ ಕೋಲಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.