ಚಿನ್ನಾಭರಣ ದೋಚಿದ ಕಳ್ಳರು
ಹುಬ್ಬಳ್ಳಿ: ನವನಗರ ಹತ್ತನೇ ಕ್ರಾಸ್ನಲ್ಲಿರುವ ಮನೆಯೊಂದರ ಹಿಂಬಾಗಿಲ ಚಿಲಕ ಮುರಿದು ಕಳ್ಳರು ರು. 1.47 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ರು. 35 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ನವನಗರ ಹತ್ತನೇ ಕ್ರಾಸ್ ನಿವಾಸಿ ವಿಜಯಕುಮಾರ್ ವಿಠಲರಾವ್ ದಾಯಪುಲೆ ಅವರು ಕೆಲವು ದಿನಗಳ ಹಿಂದೆ ತಮ್ಮ ಕುಟುಂಬದೊಂದಿಗೆ ದೇಶಪಾಂಡೆ ನಗರದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಗೆ ಬೀಗ ಹಾಕಿರುವುದನ್ನು ನೋಡಿದ ಕಳ್ಳರು ರಾತ್ರಿ ಹಿಂದಿನ ಬಾಗಿಲ ಚಿಲಕ ಮುರಿದು ಮನೆಯ ಬೆಡ್ರೂಂನಲ್ಲಿ ಇರಿಸಿದ್ದ ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ. ಈ ಕುರಿತು ನವನಗರ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
--
ಜಿಲ್ಲೆಯ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಸೂಚನೆ
ಧಾರವಾಡ: ಜಿಲ್ಲೆಯಲ್ಲಿ ಶೈಕ್ಷಣಿಕ ಮಟ್ಟ ಕುಸಿತಗೊಂಡಿರುವ ಪ್ರದೇಶಗಳನ್ನು ಗುರುತಿಸಿ ಅವುಗಳನ್ನು ಉನ್ನತ ಮಟ್ಟಕ್ಕೆ ಏರಿಸಲು ಶಿಕ್ಷಣ ಇಲಾಖೆ ಹಾಗೂ ಆಯಾ ಪ್ರದೇಶಕ್ಕೆ ಸಂಬಂಧಪಟ್ಟ ಶಾಲಾ ಶಿಕ್ಷಕರು ಶ್ರಮಿಸಬೇಕು ಎಂದು ಜಿಪಂ ಸಿಇಒ ಪಿ.ಎ. ಮೇಘಣ್ಣವರ ಹೇಳಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರಿಗಾಗಿ ಇಲ್ಲಿನ ಆಲೂರು ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಎಸ್ಎಸ್ಎಲ್ಸಿ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ 100 ದಿನಗಳ ಕ್ರಿಯಾಯೋಜನೆ ಪರಿಚಯ ಕಾರ್ಯಕ್ರಮದಲ್ಲಿ ಕ್ರಿಯಾಯೋಜನೆ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದಿರುವ ಪ್ರದೇಶಗಳ ಉನ್ನತಿಯಗಾಗಿ ಸಂಕಲ್ಪಭಾವ ತಾಳಬೇಕು. ಈ ಮೂಲಕ ಶೈಕ್ಷಣಿಕ ಮಟ್ಟದಲ್ಲಿ ಕುಸಿತ ಕುಸಿತಗೊಂಡಿರುವ ಪ್ರದೇಶವನ್ನು ಉನ್ನತಕ್ಕೆ ಏರಿಸಬೇಕು. ಶಿಕ್ಷಣದ ನಿಜವಾದ ಅರ್ಥ ಸಾಕಾರಗೊಳಿಸಲು ಶಿಕ್ಷಕರು ಪ್ರಾಮಾಣಿಕವಾಗಿ ಸಂಕಲ್ಪ ತೊಟ್ಟು ಮಕ್ಕಳ ಭವಿಷ್ಯಕ್ಕೆ ಬುನಾದಿ ನಿರ್ಮಿಸಬೇಕು. ಇದರೊಂದಿಗೆ ಕುಸಿದಿರುವ ವಿದ್ಯಾಕಾಶಿಯ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು. ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರಲ್ಲಿನ ನ್ಯೂನತೆ ಅರಿಯುವ ಮೂಲಕ ಶಿಕ್ಷಣದ ಅಕ್ಷರ ಜ್ಞಾನ ನೀಡಬೇಕು ಎಂದರು.
ಮನೋವೈದ್ಯ ಡಾ. ಆನಂದ ಪಾಂಡುರಂಗಿ, ಆಯುಕ್ತರ ಕಾರ್ಯಾಲಯದ ಸಹನಿರ್ದೇಶಕ ಶಿದ್ರಾಮ ಮನವಳ್ಳಿ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ್ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನ ರಹಿತ, ಸಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

