ಧಾರವಾಡ

ಹತ್ತಿ ರಫ್ತ್ತು ತಡೆಯಲು ನಿಯೋಗ ಮನವಿ

Published On :

ಹುಬ್ಬಳ್ಳಿ: ಪರ ರಾಜ್ಯಗಳಿಗೆ ರವಾನೆಯಾಗುತ್ತಿರುವ ಹತ್ತಿ ತಡೆಯುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯಲ್ಲಿ ಮನವಿ ಸಲ್ಲಿಸಿತು.
ಕರ್ನಾಟಕದಲ್ಲಿ ಈ ಬಾರಿ ಮಳೆ ಕಡಿಮೆಯಾಗಿದ್ದರಿಂದ ನಿರೀಕ್ಷೆಗನುಗುಣವಾಗಿ ಹತ್ತಿ ಉತ್ಪಾದನೆ ಆಗಿಲ್ಲ. ಇದರಿಂದಾಗಿ ಅರಳೆ ವ್ಯಾಪಾರಸ್ಥರು ಹಾಗೂ ಜಿನ್ನಿಂಗ್ ಮತ್ತು ಪ್ರೆಸಿಂಗ್ ಉದ್ದಿಮೆದಾರರು ಚಿಂತೆಗೀಡಾಗಿದ್ದಾರೆ. ಯಾದಗಿರಿ, ಗುಲ್ಬರ್ಗ ಮತ್ತಿತರ ಗಡಿಭಾಗದಲ್ಲಿ ಬೆಳೆದ ಹತ್ತಿ ಪರರಾಜ್ಯಗಳಿಗೆ ರವಾನೆಯಾಗುತ್ತಿದೆ. ಹೀಗಾಗಿ ಹತ್ತಿ ಅವಲಂಬಿತ ವರ್ತಕರು, ಜಿನ್ನಿಂಗ್ ಮತ್ತು ಪ್ರೆಸಿಂಗ್ ಉದ್ದಿಮೆದಾರರು, ರೈತರು, ಕೂಲಿಕಾರರು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ತಿಳಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಈ ಕುರಿತು ಸಕಾರಾತ್ಮಕ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ವಸಂತ ಲದವಾ, ಎಸ್.ಬಿ. ಆಣೆಪ್ಪನವರ, ಶಿವಶಂಕರಪ್ಪ ಮೂಗಬಸ್ತ, ಎಂ.ಎಸ್. ಸುಲ್ತಾನಪುರಿ, ಮಹಾಂತೇಶ ತಾಂವಶಿ, ಸುನೀಲ ಶಹಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.