ಕನ್ನಡ ಬೆಳವಣಿಗೆಗೆ ಕರವೇ ಕಾರ್ಯ ಶ್ಲಾಘನೀಯ
ಕನ್ನಡಪ್ರಭ ವಾರ್ತೆ, ನರೇಗಲ್ಲ. ನ. 29
ಕನ್ನಡ ಉಳಿಸಿ, ಬೆಳೆಸುವಲ್ಲಿ ಕರವೇ ಕಾರ್ಯ ಶ್ಲಾಘನೀಯ ಎಂದು ಕೆಸಿಸಿ ಬ್ಯಾಂಕ್ನ ಅಧ್ಯಕ್ಷ ಐ.ಎಸ್. ಪಾಟೀಲ ಹೇಳಿದರು.
ಅವರು ಈಚೆಗೆ ಸ್ಥಳೀಯ ಹಳೆಯ ಕೆಸಿಸಿ ಬ್ಯಾಂಕಿನ ಹತ್ತಿರ ಕರ್ನಾಟಕ ರಕ್ಷಣಾ ವೇದಿಕೆಯವರು ಆಯೋಜಿಸಿದ್ದ ರೋಣ ತಾಲೂಕು ಸ್ವಾಭಿಮಾನಿ ಕನ್ನಡಿಗರ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಮಾನ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ವಿವಿಧ ಮೂಲೆ ಮೂಲೆಗಳಲ್ಲಿ ಸಂಘಟನೆ ಮಾಡುವ ಮೂಲಕ ರಾಜ್ಯದಲ್ಲಿ ಬಡವರಿಗೆ, ದೀನ ದಲಿತರಿಗೆ ಅಲ್ಪ ಸಂಖ್ಯಾತರಿಗೆ ವಿವಿಧ ರಂಗಗಳಲ್ಲಿ ಏನಾದರೂ ಸಮಸ್ಯೆ ಬಂದಲ್ಲಿ ಅದನ್ನು ಖಂಡಿಸಿ, ಅವರಿಗೆ ಸೂಕ್ತ ನ್ಯಾಯ ಒದಗಿಸುವ ಕಾರ್ಯ ಕರ್ನಾಟಕ ರಕ್ಷಣಾ ವೇದಿಕೆ ಮಾಡುತ್ತಿದೆ. ಇಂತಹ ಸಂಘಟನೆಗಳು ಕರ್ನಾಟಕದಲ್ಲಿ ಇನ್ನೂ ಹೆಚ್ಚು ಹೆಚ್ಚು ಬೆಳೆಯುದರ ಜತೆಗೆ ಕನ್ನಡ ನಾಡನ್ನು ರಕ್ಷಿಸುವ ನಿಟ್ಟಿನಲ್ಲಿ ಸದಾ ಮುನ್ನುಗ್ಗಬೇಕು. ಗಾಂಧೀಜಿಯವರ ಅಂಹಿಸಾ ಮಾರ್ಗ ಅನುಸರಿಸಿ ಹೋರಾಟ ಮಾಡಿ, ಕರ್ನಾಟಕ ರಾಜ್ಯಕ್ಕೆ ಕನ್ನಡ ನಾಡಿಗೆ ನೆಲ, ಜಲಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನಾವು ನೀಡುತ್ತೇವೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ, ರೋಣದ ಗುಲಗಂಜಿ ಮಠದ ಗುರುಪಾದ ದೇವರು ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ಕರವೇ ತಾಲೂಕಾಧ್ಯಕ್ಷ ನಿಂಗಪ್ಪ ಹೊನ್ನಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಿವರಾಜ ಗುರಿಕಾರ ಉಪನ್ಯಾಸ ನೀಡಿದರು. ಪಪಂ ಸದಸ್ಯ ರಮೇಶ ಕಳಕೊಣ್ಣವರ, ಕಲ್ಮೇಶ ತೊಂಡಿಹಾಳ, ಶಶಿಧರ ಸಂಕನಗೌಡ್ರ, ರಜಾಕ ಹೊಸಮನಿ, ಅಂದಪ್ಪ ಮಡಿವಾಳರ, ನ್ಯಾಯವಾದಿ ವಿ.ಆರ್. ಗುಡಿಸಾಗರ, ಅಶೋಕ ಬೇವಿನಕಟ್ಟಿ, ಶಿಕ್ಷಕ ಅಣ್ಣಿಗೇರಿ, ಮಾಶಪ್ಪ ಕೊಂಡಿ, ಸಂಕನಗೌಡ್ರ ಗುರುಗಳು, ಬಸಪ್ಪ ನಾಶಿಪುಡಿ, ಶಿವಪುತ್ರಪ್ಪ ದೊಡ್ಡಮನಿ, ಕಾಶೀಂಸಾಬ್ ಪಿಂಜಾರ, ಡಾ. ಶಶಿಧರ ಹಟ್ಟಿ, ಮುತ್ತು ಅನವಾಲ, ಬಸವರಾಜ ಕಾಳೆ ಉಪಸ್ಥಿತರಿದ್ದರು. ಎಸ್.ವಿ. ಹಳ್ಳಿಕೇರಿ ಸ್ವಾಗತಿಸಿದರು. ಶಿವಾನಂದ ಗೋಗೇರಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

