ಧಾರವಾಡ

ರಾಜ್ಯ ರೇಲ್ವೆಗೆ ಖರ್ಗೆ ಕೊಡುಗೆ ಅಪಾರ: ಸಚಿವ ಆರ್.ವಿ. ದೇಶಪಾಂಡೆ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಅ. 2
ದಿಲ್ಲಿ-ಬೆಂಗಳೂರು ರೈಲು ಉತ್ತರ ಕರ್ನಾಟಕ ಮೂಲಕ ಚಲಿಸುವಂತಾಗಲಿ ಎಂದು ರಾಜ್ಯ ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಹುಬ್ಬಳ್ಳಿ ಮಂಗಳವಾರ ಆಯೋಜಿಸಿದ್ದ ಹುಬ್ಬಳ್ಳಿ-ಸಿಕಂದರಾಬಾದ್-ಹುಬ್ಬಳ್ಳಿ ಎಕ್ಸ್‌ಪ್ರೆಸ್ ಹಾಗೂ ಹುಬ್ಬಳ್ಳಿ-ಲೋಕಮಾನ್ಯ ತಿಲಕ್ ಟರ್ಮಿನಸ್-ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಪ್ರಾರಂಭೋತ್ಸವದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ತಾಳಗುಪ್ಪ-ಹೊನ್ನಾವರವರೆಗೆ ರೈಲು ಮಾರ್ಗ ನಿರ್ಮಿಸಿದಲ್ಲಿ ಕರಾವಳಿ ಪ್ರದೇಶಕ್ಕೆ ಹೆಚ್ಚು ಅನುಕೂಲವಾಗುತ್ತದೆ. ಅಳ್ನಾವರ-ದಾಂಡೇಲಿ ಮಧ್ಯೆ ಜೋಡಿ ಮಾರ್ಗ ನಿರ್ಮಿಸುವ ಜೊತೆಗೆ ಈ ಮಾರ್ಗದಲ್ಲಿ ಪ್ರಯಾಣಿಕರ ರೈಲು ಸಂಚಾರ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ರೇಲ್ವೆ ಸಚಿವರಾದ ನಂತರ ರಾಜ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಖರ್ಗೆ ಅವರು ಇನ್ನೂ ಎರಡ್ಮೂರು ವರ್ಷ ಮುಂಚೆ ಈ ಜವಾಬ್ದಾರಿ ವಹಿಸಿಕೊಂಡಿದ್ದರೆ ಹೆಚ್ಚಿನ ಯೋಜನೆಗಳು ಕರ್ನಾಟಕಕ್ಕೆ ಲಭಿಸುತ್ತಿದ್ದವು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಕಾರ್ಮಿಕ ಸಚಿವರಾಗಿದ್ದಾಗಲೂ ಆ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದರು. ಇದೀಗ ರೇಲ್ವೆ ಸಚಿವರಾದ ನಂತರ ರೇಲ್ವೆ ಇಲಾಖೆಯಲ್ಲಿ ಗಣನೀಯ ಕಾರ್ಯಗಳು ಆಗುತ್ತಿವೆ.ಅನೇಕ ವರ್ಷಗಳಿಂದ ಬೇಡಿಕೆ ಇರುವ ರೇಲ್ವೆ ಯೋಜನೆಗಳು ಖರ್ಗೆ ಅವರ ಅಧಿಕಾರದ ಅವಧಿಯಲ್ಲಿ ಜಾರಿಗೊಳ್ಳುವ ಆಶಾಭಾವವಿದೆ ಎಂದರು.
ಇದಕ್ಕೂ ಮೊದಲು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ರಾಜ್ಯದಲ್ಲಿ ಜಾರಿಗೆ ತಂದಿರುವ ಹೊಸ ರೇಲ್ವೆ ಯೋಜನೆಗಳ ಕುರಿತು ವಿವರಿಸಿದರು. ಸಂಸದ ಪ್ರಹ್ಲಾದ ಜೋಶಿ, ಸಚಿವ ಪ್ರಕಾಶ ಹುಕ್ಕೇರಿ, ಶಾಸಕ ಪ್ರಸಾದ ಅಬ್ಬಯ್ಯ, ಶಾಸಕರಾದ ಅರವಿಂದ ಬೆಲ್ಲದ, ಸಿ.ಎಸ್. ಶಿವಳ್ಳಿ, ಎನ್.ಎಚ್. ಕೋನರೆಡ್ಡಿ, ಬಸವರಾಜ ಹೊರಟ್ಟಿ, ವೀರಣ್ಣ ಮತ್ತಿಕಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ಮಹಾನಗರ ಪಾಲಿಕೆ ಸದಸ್ಯೆ ಸುಧಾ ಮಣಿಕುಂಟ್ಲಾ, ಜಿಪಂ ಅಧ್ಯಕ್ಷ ಫಕ್ಕಿರಪ್ಪ ಜಕ್ಕಣ್ಣವರ, ತಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಕಲಾಲ, ಮಾಜಿ ಸಂಸದರಾದ ಮಂಜುನಾಥ ಕುನ್ನೂರ, ಪ್ರೊ.ಐ.ಜಿ. ಸನದಿ, ಹಿರಿಯ ಪತ್ರಕರ್ತ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.