ಧಾರವಾಡ

ಯವಜನತೆಗೆ ನೈತಿಕ ಶಿಕ್ಷಣ ಅಗತ್ಯ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಅ. 5
ಪ್ರಸ್ತುತ ಯುವಕರಿಗೆ ಮಾರ್ಗದರ್ಶನ ನೀಡಲು ನೈತಿಕ ಶಿಕ್ಷಣ ಬೋಧಿಸುವ ಕೆಲಸ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಡೆಯಬೇಕಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಅಭಿಪ್ರಾಯ ಪಟ್ಟರು.
ನವರಾತ್ರಿ ದಸರಾ ಅಂಗವಾಗಿ ಧಾರವಾಡ ರಂಗಾಯಣ ಇಲ್ಲಿನ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ಶನಿವಾರ ಆಯೋಜಿಸಿದ್ದ ಯುವರಂಗೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಬಿ. ಸುಕನ್ಯಾ, ರಂಗಾಯಣ ಆಡಳಿತಾಧಿಕಾರಿ ಕೆ.ಎಚ್. ಚನ್ನೂರ, ರಂಗ ನಿರ್ದೇಶಕ ಜಗುಚಂದ್ರ ಕೂಡ್ಲ, ಶಿವಾನಂದ ಹೂಗಾರ, ಆನಂದ ಚಿತ್ತರಗಿ, ಎಸ್.ಬಿ. ಜಗಾಪುರ, ಸುರೇಶ ಬೆಟಗೇರಿ ಇದ್ದರು.
ನಂತರ ಕುಂ. ವೀರಭದ್ರಪ್ಪ ರಚಿಸಿದ, ಲಕ್ಷ್ಮಣ ಪೀರಗಾರ ನಿರ್ದೇಶನದ ಕಥೆಯಲ್ಲೊಂದು ಕಥೆ ನಾಟಕವನ್ನು ಜೆಎಸ್‌ಎಸ್ ಬನಶಂಕರಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.
ಯುವಕರಲ್ಲಿ ನೈತಿಕ ಸ್ಥೈರ್ಯ ತುಂಬುವ ಕೆಲಸ ಆಗಬೇಕು. ಅಂದಾಗ ಮಾತ್ರ ಒಳ್ಳೆಯ ಸಮಾಜ ನಿರ್ಮಾಣವಾಗಲು ಸಾಧ್ಯ. ಸದ್ಯ ಯುವಕರು ಸ್ವಯಂ ಉದ್ಯೋಗ ಮಾಡಿಕೊಂಡು ಜೀವನದಲ್ಲಿ ಸ್ವಾವಲಂಬಿಯಾಗಿ ಬದುಕುವ ಕಲೆ ರೂಢಿಸಿಕೊಳ್ಳಬೇಕು.
- ಎನ್.ಎಚ್. ಕೋನರಡ್ಡಿ ,
ಶಾಸಕ, ನವಲಗುಂದ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.