ಸಚಿವ ಲಾಡ್ ಸ್ವಪ್ರೇರಣೆಯಿಂದ ರಾಜಿನಾಮೆ ನೀಡಲಿ
ಹುಬ್ಬಳ್ಳಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಮೂಲ ಸೌಲಭ್ಯ ಇಲಾಖೆ ಸಚಿವ ಸಂತೋಷ ಲಾಡ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಸರ್ಕಾರಕ್ಕೆ ಕಾಡುತ್ತಿರುವುದು ಸಾಕ್ಷಾಧಾರಗಳ ಕೊರತೆ ಅಲ್ಲ, ಬದಲಾಗಿ ಇಚ್ಛಾಶಕ್ತಿ ಕೊರತೆ ಎಂದು ಸಮಾಜ ಪರಿವರ್ತನಾ ಸಮಾಜದ ಎಸ್.ಆರ್. ಹಿರೇಮಠ ದೂರಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ಸಾಕಷ್ಟು ಸಾಕ್ಷಾಧಾರಗಳು ಲಭಿಸಿದ್ದಲ್ಲದೆ, ಲೋಕಾಯುಕ್ತ ವರದಿಯಲ್ಲೂ ಅವರ ಹೆಸರು ದಾಖಲಾಗಿದೆ. ಹೀಗಾಗಿ, ಸಚಿವ ಸಂತೋಷ ಲಾಡ್ ಸ್ವಪ್ರೇರಣೆಯಿಂದ ರಾಜಿನಾಮೆ ನೀಡಿ ಸಂಪುಟದಿಂದ ಹೊರಬರಬೇಕು ಎಂದು ಒತ್ತಾಯಿಸಿದರು.
ಸಂಪುಟದಿಂದ ಕೈಬಿಡಲಿ: ವಿ.ಎಸ್. ಲಾಡ್ ಆ್ಯಂಡ್ ಸನ್ಸ್ ಕಂಪನಿ ಅಕ್ರಮ ಗಣಿಗಾರಿಕೆಯಲ್ಲಿ ಮುಳುಗಿರುವುದನ್ನು ಸಿಇಸಿ ವರದಿ ಹಾಗೂ ಲೋಕಾಯುಕ್ತ ವರದಿಯಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ. ರಾಜ್ಯಪಾಲ ಹಂಸರಾಜ ಭಾರದ್ವಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ ಅವರು ಸಚಿವ ಸಂತೋಷ ಲಾಡ್ ಅವರನ್ನು ಸಂಪುಟದಿಂದ ತೆಗೆಯಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಹಗರಣದಲ್ಲಿ ಪಾಲ್ಗೊಂಡಿರುವ ಇನ್ನಿತರ ಅಧಿಕಾರಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದರು. ಸಚಿವ ಸಂತೋಷ ಲಾಡ್ ಅವರಿಗೆ ಸೇರಿರುವ ಅಕ್ರಮ ಅದಿರನ್ನು ಅರಣ್ಯ ಇಲಾಖೆ ಜಫ್ತು ಮಾಡಿಕೊಂಡಿರುವುದು ಸಹ ಪ್ರಮುಖ ಸಾಕ್ಷಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

