ಹಣ, ಆಭರಣ ಕಳ್ಳತನ
ಹುಬ್ಬಳ್ಳಿ: ಮನೆ ಮಾಲೀಕರು ಬೀಗ ಹಾಕಿ ಊರಿಗೆ ಹೋಗಿದ್ದ ವೇಳೆಯಲ್ಲಿ ಮನೆ ಬೀಗ ಮುರಿದ ಕಳ್ಳರು ರು. 9 ಸಾವಿರ ನಗದು ಮತ್ತು 4 ಗ್ರಾಂ ಕಿವಿಯೋಲೆ ಕದ್ದುಕೊಂಡು ಹೋಗಿರುವ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನೆಹರು ನಗರದ ಪ್ರಶಾಂತ ಗಜಾನನ ಯರಕದ ಅವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ವೇಳೆ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಶಾಂತ ಯರಕದ ಗೋಕುಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಣ್ಣಿಗೇರಿ: ಕಳ್ಳರ ಹಾವಳಿ
ಕನ್ನಡಪ್ರಭ ವಾರ್ತೆ, ಅಣ್ಣಿಗೇರಿ, ಅ. 8
ಪಟ್ಟಣದ ಜನತೆಯನ್ನು ಬೆಚ್ಚಿ ಬೀಳಿಸಿರುವ ಸರಣಿಗಳ್ಳತನ ತಂಡ ನಿಗ್ರಹಿಸುವಲ್ಲಿ ಸ್ಥಳೀಯ ಪೊಲೀಸರು ಹರಸಾಹಸಪಡುವ ಪರಿಸ್ಥಿತಿ ತಲೆದೋರಿದೆ.
ಎರಡು ತಿಂಗಳ ಹಿಂದೆ ಹಳೇ ಅಮೃತೇಶ್ವರ ನಗರದಲ್ಲಿ ಮನೆ ಬೀಗ ಒಡೆದು ಹಣ, ಚಿನ್ನಾಭರಣ ಲೂಟಿ, ಮಹಿಳೆಯರ ಮೈಮೇಲಿನ ಚಿನ್ನಾಭರಣ ಕಳ್ಳತನವನ್ನು ಭೇದಿಸುವಲ್ಲಿ ಆರಕ್ಷಕ ಠಾಣಾಧಿಕಾರಿ ವಿಶ್ವನಾಥ ಚೌಗಲೆ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು, ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

