ಮನೆಗಳ್ಳತನ: ಮೂವರ ಸೆರೆ
ಹುಬ್ಬಳ್ಳಿ: ಕೆಲವು ದಿನಗಳ ಹಿಂದೆ ಕಮರಿಪೇಟೆಯಲ್ಲಿ ಸಂಭವಿಸಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕಮರಿಪೇಟೆಯ ರಾಜು ಕಠಾರೆ, ಸುನೀಲ, ಕುಬೇಂದ್ರ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ 38 ಗ್ರಾಂ ತೂಕದ ತಾಳಿ ಮತ್ತು 5 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ಕಮರಿಪೇಟೆಯಲ್ಲಿ ಪವಾರ ಎನ್ನುವವರ ಮನೆ ಎದುರು ಈ ಮೂವರು ಸಿಗರೇಟು ಸೇದುತ್ತ ನಿಂತಿದ್ದ ವೇಳೆ ಮನೆ ಮಾಲೀಕ ಪವಾರ ಅವರು ಅಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಸಿಟ್ಟು ಮಾಡಿಕೊಂಡಿದ್ದ ಮೂವರು ಅವರ ಮನೆಯಲ್ಲಿ ಕಳ್ಳತನ ಮಾಡಿದ್ದರು.
ಚೂರಿ ಇರಿತ: ಇಬ್ಬರ ಬಂಧನ
ಹುಬ್ಬಳ್ಳಿ: ಇಲ್ಲಿನ ಬೈಲಪ್ಪನವರ ನಗರದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿರಡಿನಗರದ ಸಾಗರ ಈಶ್ವರ ಸಂತಿ ಮತ್ತು ಫಾರುಖ್ ರಫೀಕ್ ದೊಡ್ಡಮನಿ ಎಂದು ಗುರುತಿಸಲಾಗಿದೆ. ಶಿರಡಿ ನಗರ ನಿವಾಸಿ ವಿನೋದ ಬೆಂಡಿಗೇರಿ ಎಂಬ ಯುವಕನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದರು.
ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಬುದ್ನಿ ಅವರು ಪ್ರಕರಣ ಕೈಗೆತ್ತಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಬಂಧಿಸಿದ್ದು, ಸದ್ಯ ಆರೋಪಿಗಳು ನ್ಯಾಯಾಂಗ ವಶದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

