ವೆಂಕಟಾಪುರ: ಸಿಡಿಲು ಬಡಿದು ಓರ್ವ ಸಾವು
ಧಾರವಾಡ: ತಾಲೂಕಿನ ವೆಂಕಟಾಪುರದಲ್ಲಿ ರೈತನೋರ್ವ ಹೊಲದಿಂದ ಮನೆಗೆ ಮರಳುವಾಗ ಸಿಡಿಲು ಬಡಿದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮಂಗಳವಾರ ಮಧ್ಯಾಹ್ನದಿಂದ ಸುಮಾರು ಒಂದು ಗಂಟೆ ಧಾರವಾಡ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗುಡುಗು-ಸಿಡಿಲಿನ ಮಳೆಯಾಗಿದ್ದು, ವೆಂಕಟಾಪುರದ ಶಿವಲಿಂಗಪ್ಪ ಹವಾಲ್ದಾರ (40) ಹೊಲದಲ್ಲಿನ ಕೆಲಸ ಮುಗಿಸಿ ಮನೆಗೆ ಮರಳುವಾಗ ಸಿಡಿಲು ಬಡಿದು ಮೃತನಾಗಿದ್ದಾನೆಂದು ಪ್ರಕರಣ ದಾಖಲಿಸಿರುವ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಶ್ರದ್ಧೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿ: ಜಿಪಂ ಸಿಇಒ ಪಿ.ಎ. ಮೇಘಣ್ಣವರ
ಧಾರವಾಡ: ಸರ್ಕಾರಿ ನೌಕರರು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಶ್ರದ್ಧೆ, ಪ್ರಾಮಾಣಿಕತೆ, ನಿಷ್ಠೆಯಿಂದ ಕಾರ್ಯ ನಿರ್ವಹಿಸಿದಾಗ ಸಮಾಜದ ಅಭಿವೃದ್ಧಿಯಾಗಲು ಸಾಧ್ಯ. ಅಲ್ಲದೇ, ಸರ್ಕಾರದ ದಕ್ಷತೆಯೂ ಹೆಚ್ಚುತ್ತದೆ ಎಂದು ಜಿಪಂ ಸಿಇಓ ಪಿ.ಎ. ಮೇಘಣ್ಣವರ ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಂಡ ಸರ್ಕಾರಿ ನೌಕರರು ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳು ಕಾರ್ಯಾಗಾರ ಉದ್ಘಾಟಿಸಿದ ಅವರು, ನೌಕರರು ತಮ್ಮ ಕರ್ತವ್ಯದ ಬಗ್ಗೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರದ ಮಾದರಿಯಂತೆ ಸಮಾನತೆ ನೀಡಿದಾಗ ನೌಕರರು ಸಹ ಹುಮ್ಮಸ್ಸಿನಿಂದ ಕೆಲಸ ಮಾಡಬಹುದು. ಪ್ರತಿಯೊಂದು ಇಲಾಖೆಗಳಿಗೂ ಸಿಬ್ಬಂದಿ ಕೊರತೆಯನ್ನು ನೀಗಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ರಾಜ್ಯ ಸರ್ಕಾರದ ವಿಷಯದಲ್ಲಿ ರಾಜ್ಯದಲ್ಲಿ ಧಾರವಾಡ ಜಿಲ್ಲೆಯು ಪ್ರಥಮ-ದ್ವಿತೀಯ ಸ್ಥಾನವನ್ನು ಕಾಯ್ದುಕೊಂಡಿದೆ ಎಂದರು.
ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಪರಿಷತ್ ಸದಸ್ಯ ಎಸ್.ಎಫ್. ಸಿದ್ದನಗೌಡರ, ಎಚ್.ಬಿ. ದಳವಾಯಿ, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ. ರಾಮದುರ್ಗ, ಎಸ್.ಎಫ್. ಸುಬಾಪುರಮಠ, ಗಿರೀಶ ಪಾಟೀಲ, ಕೆ.ಎಚ್. ನಾಯಕ, ಆಶೋಕ ಸಾಲಗಟ್ಟಿ, ಬಿ.ಎನ್. ಕಟಗಿ, ಎಸ್.ಬಿ. ಕೇಸರಿ, ಜಂಗಮಗೌಡರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

