ಇಂದು ತಪಾಸಣಾ ಶಿಬಿರ
ಕಲಘಟಗಿ: ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆ ಆವರಣದಲ್ಲಿ ಅ. 17ರಂದು ಉಚಿತ ಕಣ್ಣು ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಸಂಸದ ಪ್ರಹ್ಲಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ, ಡಾ.ಎಂ.ಎಂ. ಜೋಶಿ, ನೇತ್ರ ವಿಜ್ಞಾನ ಸಂಸ್ಥೆ ಸಂಯುಕ್ತಾಶ್ರಯದಲ್ಲಿನ ಈ ಶಿಬಿರವನ್ನು ಸಂಸದ ಪ್ರಹ್ಲಾದ ಜೋಶಿ ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷ ಎಸ್.ಸಿ. ಅಗಡಿ, ವಕೀಲ ಸಿ.ಎಂ. ನಿಂಬಣ್ಣವರ, ಡಾ. ಎಂ.ಎಂ. ಜೋಶಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
'ನನಗೆಲ್ಲಾ ಗೊತ್ತೈತಿ' ನಾಟಕ
ಧಾರವಾಡ: ಇಲ್ಲಿನ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಅ. 18ರಂದು ಸಂಜೆ 6ಕ್ಕೆ ಎಲ್.ಐ. ದೇವಾಂಗಮಠ ಅವರ ನಿರ್ದೇಶನದ 'ನನಗೆಲ್ಲಾ ಗೊತ್ತೈತಿ' ನಾಟಕ ಪ್ರದರ್ಶನ ನಡೆಯಲಿದೆ. ಚಿತ್ರನಟ ಸುರೇಶ ಕುಲಕರ್ಣಿ ಅಧ್ಯಕ್ಷತೆ ವಹಿಸುವರು. ಮಾಜಿ ಮಹಾಪೌರ ಎಚ್.ವಿ. ಡಂಬಳ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾಳೆ ದತ್ತಿ ಕಾರ್ಯಕ್ರಮ
ಧಾರವಾಡ: ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಅ. 18ರಂದು ಸಂಜೆ 6ಕ್ಕೆ ಮಲ್ಲವ್ವ ಸದ್ನಾಳ ದತ್ತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

