ಸಾಮಾಜಿಕ ಪರಿವರ್ತನೆಯಲ್ಲಿ ಪಾಲ್ಗೊಳ್ಳಿ: ಶಿರಿಯಣ್ಣವರ
ಹುಬ್ಬಳ್ಳಿ: ಭಾರತದ ನ್ಯಾಯಾಂಗ ವ್ಯವಸ್ಥೆ ಬಲಾಢ್ಯವಾಗಿದ್ದು ಅದರಲ್ಲಿ ಕಾನೂನು ವಿದ್ಯಾರ್ಥಿಗಳು, ನ್ಯಾಯವಾದಿಗಳು ಹಾಗೂ ನ್ಯಾಯಾಧೀಶರು ಜೊತೆಗೂಡಿ ಸಾಮಾಜಿಕ ಪರಿವರ್ತನೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶ ವಿ.ಬಿ. ಶಿರಿಯಣ್ಣವರ ಹೇಳಿದರು. ನಗರದ ಕೆಎಲ್ಇ ಸಂಸ್ಥೆಯ ಗುರುಸಿದ್ದಪ್ಪ ಕೋತಂಬ್ರಿ ಕಾನೂನು ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಠಿಣ ಪರಿಶ್ರಮ ಮತ್ತು ಭಾಷೆ ಮೇಲೆ ಪ್ರಭುತ್ವ ಸಾಧಿಸಿದಾಗ ಮಾತ್ರ ವಕೀಲರು ಯಶಸ್ವಿಯಾಗಲು ಸಾಧ್ಯ. ವಕೀಲರು ಸಮಾಜ ನಿರ್ಮಿಸುವ ಮುಂದಾಳುಗಳಾಗಿದ್ದು, ನೈತಿಕ ಅಧಃಪತನದಿಂದ ಮೇಲೆದ್ದು ರಾಷ್ಟ್ರ ನಿರ್ಮಿಸುವ ಕಾರ್ಯದಲ್ಲಿ ತೊಡಗಬೇಕು ಎಂದರು. ಕಾನೂನು ವಿದ್ಯಾರ್ಥಿಗಳು ಕಾನೂನಿನ ಜ್ಞಾನಾರ್ಜನೆಯೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರಾಧ್ಯಾಪಕಿ ಶಾರದಾ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸುಪ್ರಿಯಾ ಸ್ವಾಮಿ, ಪ್ರೊ. ಎಲ್.ಎಂ. ಶೀಲವಂತ, ಪ್ರೊ. ಎಸ್.ಎಂ. ಹುಲ್ಲೂರ ಹಾಗೂ ಪ್ರೊ. ಅಶ್ವಿನಿ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು. ಪ್ರೀತಿ ಕಸ್ತೂರಿ ಸ್ವಾಗತಿಸಿದರು. ಮೋಮಿನ ಮನತಾಜ ನಿರೂಪಿಸಿದರು. ಹರ್ಷಾ ಸುಣಗಾರ ವಂದಿಸಿದರು.
21ರಂದು ಪೊಲೀಸ್ ಹುತಾತ್ಮರ ದಿನಾಚರಣೆ
ಧಾರವಾಡ: ಜಿಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದ ವತಿಯಿಂದ ಇಲ್ಲಿನ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಅ. 21 ರಂದು ಬೆಳಗ್ಗೆ 8ಕ್ಕೆ ಪೊಲೀಸ್ ಹುತಾತ್ಮರ ದಿನ ಆಚರಣೆ ಮಾಡಲಾಗುತ್ತಿದೆ. ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಪ್ರಕಾಶ ನಾಡಿಗೇರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಲೋಕೇಶ್ ಕುಮಾರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಆನಂದ ವೃದ್ಧಾಶ್ರಮದಲ್ಲಿ ಬನ್ನಿ ಹಬ್ಬ
ಧಾರವಾಡ: ಇಲ್ಲಿನ ಚಿಗುರು ಸಂಘದ ವತಿಯಿಂದ ದಸರಾ ಹಬ್ಬದ ನಿಮಿತ್ತ ಧಾರವಾಡದ ಆನಂದ ವೃದ್ಧಾಶ್ರಮದಲ್ಲಿ ಬನ್ನಿ ಹಾಗೂ ಸಿಹಿ ಹಂಚುವ ಸಮಾರಂಭ ನಡೆಯಿತು. ಕುಟುಂಬದಿಂದ ಹೊರಬಂದು ವೃದ್ಧಾಶ್ರಮದಲ್ಲಿ ವಾಸಿಸುತ್ತಿರುವ ಹಿರಿಯರಿಗೆ ಬನ್ನಿ ಕೊಟ್ಟು ಬಂಗಾರದಂಗ ಇರೋಣ ಎಂಬ ಸಮಾಧಾನದ ಮಾತುಗಳನ್ನಾಡಿದರು. ಸಂಘದ ಸದಸ್ಯರಾದ ನಿಖಿಲ ಮಿಟ್ಟಿ, ಸೌಮ್ಯಾ ಜಾಗೀರದಾರ, ಶ್ರೇಯಾ ಜಾಗೀರದಾರ, ಪಲ್ಲವಿ ಕುಲಕರ್ಣಿ, ಸ್ಮೃತಿ ಜೋಶಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

