ಧಾರವಾಡ

ಆರೋಗ್ಯ ಸೇವೆಗೆ ಸಾರ್ವಜನಿಕರು ಸಹಕರಿಸಿ

Published On :

ಕನ್ನಡಪ್ರಭ ವಾರ್ತೆ, ಕಲಘಟಗಿ, ಅ. 17
ಇಂದಿನ ತಂತ್ರಜ್ಞಾನ ಯುಗದಲ್ಲಿ ಜನಸಾಮಾನ್ಯರಿಗೆ ಆರೋಗ್ಯ ಸೇವೆ ಸಮರ್ಪಕವಾಗಿ ದೊರಕುತ್ತಿಲ್ಲ. ಅದಕ್ಕಾಗಿ ಸಂಘ-ಸಂಸ್ಥೆಗಳು, ತಜ್ಞ ವೈದ್ಯರು, ಸಾರ್ವಜನಿಕರ ಸಹಕಾರ ಮುಖ್ಯ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಹುಬ್ಬಳ್ಳಿಯ ಕ್ಷಮತಾ ಸೇವಾ ಸಂಸ್ಥೆ, ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಜಿ ಕ್ರೆಡಲ್ ಅಧ್ಯಕ್ಷ ಸಿ.ಎಂ. ನಿಂಬಣ್ಣವರ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ನೇತ್ರ ತಜ್ಞ ಡಾ. ಎಂ.ಎಂ. ಜೋಶಿ ಅವರು ಮಾತನಾಡಿದರು. ಜಿಪಂ ಅಧ್ಯಕ್ಷ ಎಸ್.ಸಿ.ಅಗಡಿ, ಸದಸ್ಯರಾದ ವೈ.ಬಿ. ದಾಸನಕೊಪ್ಪ, ಬಿ.ವೈ. ಕರಡಿಕೊಪ್ಪ, ಮಾಜಿ ಸದಸ್ಯೆ ಗೀತಾ ಮರಲಿಮಗಣ್ಣವರ, ತಾಪಂ ಅಧ್ಯಕ್ಷ ಎಂ.ಎಫ್. ಜಾವುರ, ಶೇಖಪ್ಪ ಹುಲಗೂರ ಬಸವಣ್ಣಯ್ಯ ಹಿರೇಮಠ, ವಿಜಯ ನಾಡಜೋಶಿ, ಕಲ್ಮೇಶ ಹಾವೇರಿಪೇಟ, ತಾಲೂಕು ಬಿಜೆಪಿ ಅಧ್ಯಕ್ಷ ವೈ.ಎನ್. ಪಾಟೀಲ್, ವಿ.ಎಸ್. ನೂಲ್ವಿ, ಸದು ಚಿಂತಾಮನಿ, ಗಂಗಾದರ ಗೌಳಿ, ಬಸವರಾಜ ಶೆರೆವಾಡ ಅಶೋಕ ಕಾಶಿ ಬಡಗೇರ, ಸೋಮು ಕೊಪ್ಪದ, ಹಾಗೂ ತಜ್ಞ ವೈದ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.