ಧಾರವಾಡ

ಸುದ್ದಿ ಸಂಕ್ಷೇಪ

Published On :

22ರಂದು ಖಾಸಗಿ ಶಾಲಾ ಕಾಲೇಜುಗಳ ನೌಕರರ ಸಭೆ
ಬೆಂಗಳೂರು:  ಖಾಸಗಿ ಶಾಲಾ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕಕರು ನೇಮಕಾತಿ ಹೊಂದಿದ ದಿನದಿಂದಲೇ ವೇತನ ನಿಗದಿ, ರಜಾಸೌಲಭ್ಯ ಹಾಗೂ ನಿವೃತ್ತಿ ವೇತನಕ್ಕೆ ಅವರ ಸೇವೆಯನ್ನು ಪರಿಗಣಿಸುವ ಸಂಬಂಧದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಒಂದು ನಿರ್ಧಾರವನ್ನು ಕೈಗೊಳ್ಳಲು ಸಭೆಯೊಂದನ್ನು ಏರ್ಪಡಿಸುವವರಿದ್ದಾರೆ. ಈ ಬಗ್ಗೆ ಚರ್ಚಿಸಲು ಖಾಸಗಿ ಶಾಲಾ-ಕಾಲೇಜುಗಳ ನೌಕರರ ಸಂಘಟನೆಯ ಸಭೆಯನ್ನು ಈ ತಿಂಗಳ 22ರಂದು ಬೆಳಗ್ಗೆ 10 ಗಂಟೆಗೆ ಬಸವೇಶ್ವರ ಪ.ಪೂ. ಕಾಲೇಜು, ರಾಜಾಜಿ ನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಇದರಲ್ಲಿ ಭಾಗವಹಿಸಬೇಕು ಎಂದು ಅ.ಕ. ಖಾಸಗಿ ಅನುದಾನಿತ ಪದವಿ ಪೂರ್ವ ಮಹಾವಿದ್ಯಾಲಯಗಳ ಬೋಧಕ- ಬೋಧಕೇತರ ಮಹಾಸಂಘದ ಅಧ್ಯಕ್ಷ ಎಂ.ಪಿ.ಕರಬಸಪ್ಪ ಮತ್ತು ಪ್ರ.ಕಾರ್ಯದರ್ಶಿ ಎಚ್.ಕೆ. ಗುರವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸೌಲಭ್ಯವನ್ನು ಸರ್ಕಾರ 1992ರ ವರೆಗೆ ನೀಡಿ ನಂತರದ ಸಿಬ್ಬಂದಿಗೆ ನೀಡಿಲ್ಲ. ಇದನ್ನು ಪ್ರಶ್ನಿಸಿ ನೌಕರರು ನ್ಯಾಯಾಲಯದ ಮೊರೆ ಹೋಗಿದ್ದರು. ಉಚ್ಚನ್ಯಾಯಾಲಯದಲ್ಲಿ ಸೇವೆ ಪರಿಗಣಿಸುವ ಬಗ್ಗೆ ಆದೇಶವಾಗಿತ್ತು. ಉಚ್ಚನ್ಯಾಯಾಲಯದ ಆದೇಶವನ್ನು ಕರ್ನಾಟಕ ಸರ್ಕಾರ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಆ.21ರಂದು ಅದು ವಜಾ ಆಗಿದೆ.
ಮತದಾರರ ನೋಂದಣಿ: ಜೂನ್ 2014ರಲ್ಲಿ ನಡೆಯಲಿರುವ ಪದವೀಧರ ಮತ್ತು ಶಿಕ್ಷಕರ ಮತ ಕ್ಷೇತ್ರದ ಚುನಾವಣೆಗೆ ಮತದಾರರು ನೋಂದಣಿ ಮಾಡುವ ಪ್ರಕ್ರಿಯೆ ನಡೆದಿದೆ. ಮೊದಲನೇ ಕಂತಿನ ನೋಂದಣಿ ಅ.30ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅರ್ಹ ಮತದಾರರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕೆಂದು ಖಾಸಗಿ ಅನುದಾನಿತ ಪ.ಪೂ ಕಾಲೇಜುಗಳ ಮಹಾಸಂಘ ಹಾಗೂ ಕರ್ನಾಟಕ ಗ್ರಾಜ್ಯುಯೇಟ್ ಪರಿಷತ್ ಪ್ರಕಟಣೆ ತಿಳಿಸಿದೆ.
ಮೈದಾನ ಕಬಳಿಕೆಗೆ ಷಡ್ಯಂತ್ರ
ಹುಬ್ಬಳ್ಳಿ: ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂಕಾಲು ವರ್ಷದೊಳಗೆ ಹುಬ್ಬಳ್ಳಿಯ ಜಿಮಖಾನಾ ಮೈದಾನ ಕಬಳಿಸುವ ಷಡ್ಯಂತ್ರ ನಡೆದಿದೆ. ಈ ಕಬಳಿಕೆ ಹಿಂದೆ ಇರುವವರು ಇಲ್ಲಿನ ಜನಪ್ರತಿನಿಧಿಗಳು ವಿನಃ ಮತ್ತಾರು ಅಲ್ಲ ಎಂದು ಸಮಾಜ ಪರಿವರ್ತನ ಸಮುದಾಯದ ಎಸ್.ಆರ್. ಹೀರೇಮಠ ಆರೋಪಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಟಿಷ್ ಆಡಳಿತಾವಧಿಯಲ್ಲಿ ಗುತ್ತಿಗೆ ನೀಡಿರುವ ಸಂದರ್ಭ ರೂಪಿಸಲಾಗಿದ್ದ ನಿಯಮಗಳನ್ನು ಅಂದಿನ ಜಿಲ್ಲಾಧಿಕಾರಿ ದರ್ಪಣ್ ಜೈನ್ ಅವರು ಮೂಲನಿಯಮಗಳನ್ನು ಬದಲಿಸಲು ಅಧಿಕಾರವಿಲ್ಲದಿದ್ದರೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಂದರ್ಭ ಜಿಮಖಾನಾ ಸದಸ್ಯರಿಗೆ ಮನವಿಗೆ ತಕ್ಕಂತೆ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಿ ಉದ್ಧಟತನ ತೋರಿದ್ದಾರೆ. ಸೆ. 5ರಂದು ಜಿಮಖಾನಾ ಪದಾಧಿಕಾರಿಗಳು ಸಂಸ್ಥೆಯ ಉಪನಿಯಮಗಳ ಬದಲಾವಣೆಯೊಂದಿಗೆ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಗೆ ಸರ್ಕಾರ ಕೇವಲ ತಿಂಗಳ ಅವಧಿಯಲ್ಲಿ ಒಪ್ಪಿಗೆ ಸೂಚಿಸಿರುವುದನ್ನು ನೋಡಿದರೆ ಇದರ ಹಿಂದೆ ರು. 80 ಕೋಟಿ ಮೌಲ್ಯದ ಜಮೀನನ್ನು ಕಬಳಿಸುವ ವ್ಯವಸ್ಥಿತ ಹುನ್ನಾರ ಅಡಗಿದೆ ಎನ್ನುವುದರಲ್ಲಿ ಸಂಶಯ ಇಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.