ಧಾರವಾಡ

ಧರ್ಮಸ್ಥಳ ಹೆಸರಿಗೆ ಕಳಂಕ ಬೇಡ

Published On :

ಧಾರವಾಡ: ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿ, ದೇಶ-ವಿದೇಶಗಳಲ್ಲಿ ಕರ್ನಾಟಕದ ಹೆಸರು ಅಚ್ಚಳಿಯದಂತೆ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರ ಹೆಸರಿಗೆ ಕಳಂಕ ತರುತ್ತಿರುವ ಕೆಲ ದುಷ್ಟಶಕ್ತಿಗಳ ವರ್ತನೆಯನ್ನು ಇಲ್ಲಿಯ ಎಸ್‌ಡಿಎಂ ಶಿಕ್ಷಣ ಸಂಸ್ಥೆ ಹಾಗೂ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಗಂಭೀರವಾಗಿ ಖಂಡಿಸಿವೆ.
ಸಾರ್ವಜನಿಕರ ಮನದಲ್ಲಿ ಶ್ರೀಕ್ಷೇತ್ರದ ಬಗ್ಗೆ ವಿಷದ ಬೀಜ ಬಿತ್ತಿ, ಇಡಿ ವಾತಾವರಣದ ಶಾಂತತ್ನೆ ಕದಡುತ್ತಿರುವವರ ವಿರುದ್ಧ ಸರ್ಕಾರ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕೆಂದು ನಗರದಲ್ಲಿ ಶುಕ್ರವಾರ ನಡೆದ ಎಸ್‌ಡಿಎಂ ಶಿಕ್ಷಣ ಸಂಸ್ಥೆ ಹಾಗೂ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಭೆಯಲ್ಲಿ ಒತ್ತಾಯಿಸಲಾಯಿತು.
ಸೌಜನ್ಯಾ ಸಾವಿನ ಸುತ್ತ ಹೆಣೆದಿರುವ ಈ ಜಾಲ್ನ ಭೇದಿಸುವುದಕ್ಕಾಗಿ ಈಗಾಗಲೇ ಹೆಗ್ಗಡೆಯವರು ತಮ್ಮ ಸಂಪೂರ್ಣ ಸಹಕಾರ್ನ ಘೋಷಿಸಿದ್ದಾರೆ. ಅನೇಕ ಜನ ಹಿರಿಯರು ಕ್ಷೇತ್ರದ ಹಾಗೂ ಹೆಗ್ಗಡೆಯವರ ಅಭಿಮಾನಿಗಳು ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನ ಖಂಡಿಸಿದ್ದಾರೆ.
ಎಸ್‌ಡಿಎಂ ಸಂಸ್ಥೆ ಉಪಾಧ್ಯಕ್ಷ, ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿ ಡಾ. ಅಜಿತಪ್ರಸಾದ, ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ. ನಿರಂಜನಕುಮಾರ, ಎಸ್‌ಡಿಎಂ ಸೊಸೈಟಿ ಜಂಟಿ ಕಾರ್ಯದರ್ಶಿ ಜೀವಂಧರಕುಮಾರ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.