ಧಾರವಾಡ

ಸುದ್ದಿ ಸಂಕ್ಷೇಪ

Published On :

ಇಂದು ವಿದ್ಯಾರ್ಥಿ ಸಮಾವೇಶ
ಧಾರವಾಡ: ರಾಜ್ಯ ಮಾದಿಗ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಅ. 20ರಂದು ಬೆಳಗ್ಗೆ 10ಕ್ಕೆ ವಿದ್ಯಾರ್ಥಿ ಸಮಾವೇಶ ಮತ್ತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಡಾ. ಸದಾಶಿವ ನಡುವಿನಕೇರಿ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಮಾಜದ ವಿದ್ಯಾರ್ಥಿಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಅಲ್ಲದೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ಗಣ್ಯರಿಗೆ ಸನ್ಮಾನ ಮಾಡಲಾಗುತ್ತದೆ. ನಂತರ ವಿದ್ಯಾರ್ಥಿ ಸಂಘಟನೆ ಮತ್ತು ಗುರಿ, ಮಾದಿಗ ಸಮಾಜ ಮತ್ತು ಶಿಕ್ಷಣ, ಒಳ ಮೀಸಲಾತಿ-ಒಂದು ಅವಲೋಕನ, ಮಾದಿಗ ಸಮಾಜದ ಸಂಘಟನೆ ಮತ್ತು ಮಾದಿಗ ಸಮಾಜದ ಸವಾಲುಗಳು-ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ ಎಂದರು. ಚಿತ್ರದುರ್ಗದ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಎಚ್. ಮುನಿಯಪ್ಪ ಸಮಾವೇಶ ಉದ್ಘಾಟಿಸುತ್ತಾರೆ. ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭಾಗವಹಿಸಲಿದ್ದು, ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಅಂದು ಸಂಜೆ 5ಕ್ಕೆ ನಡೆಯುವ ಸಮಾರೋಪದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಲ್. ಹನುಮಂತಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕವಿವಿ ಪ್ರಾಧ್ಯಾಪಕ ಜಿ.ಬಿ. ನಂದನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ನಡುವಿನಕೇರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಲೋಕಮಾನ್ಯ ರಾಮದತ್ತ, ಡಾ. ಎಂ.ವೈ. ಬ್ಯಾಲ್ಯಾಳ, ಎಸ್.ಎಸ್. ದೊಡ್ಡಮನಿ, ಮಂಜುನಾಥ ಜೋಗಣ್ಣವರ ಇದ್ದರು.
ಕುಂದಗೋಳ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮ ಪ್ರಚಾರ
ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಆಯ್ದ ಗ್ರಾಮಗಳಲ್ಲಿ ವಾರ್ತಾ ಇಲಾಖೆಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮಗಳನ್ನು ಅ. 20ರಿಂದ ಅ. 31ರ ವರೆಗೆ ಹಮ್ಮಿಕೊಳ್ಳಲಾಗಿದೆ. ಅ. 20ರಂದು ಬಿಳೇಬಾಳ, ಶಿರೂರು, 21ರಂದು ರಟ್ಟಿಗೇರಿ, ಕಳಸ, 22ರಂದು ಮಂಡಿನಾಳ, ಗೌಡಗೇರಿ, 23ರಂದು ಹೊಸಳ್ಳಿ, ಸಂಶಿ, 24ರಂದು ಚಿಕ್ಕಹರಕುಣಿ, ಹಿರೇಹರಕುಣಿ, 25ರಂದು ಸುಲ್ತಾನಪುರ, ಹರ್ಲಾಪುರ, 26ರಂದು ಬಾಗವಾಡ, ಚಿಕ್ಕಗುಂಜಳ, 27ರಂದು ನೆಲಗುಡ್ಡ, ಬೂಕೊಪ್ಪ, 28ರಂದು ಹಳೇಹಂಚನಾಳ, ಹೊಸಹಂಚಿನಾಳ, 29ರಂದು ತೀರ್ಥ ಹನುಮನಹಳ್ಳಿ, 30ರಂದು ರಾಮಾಪುರ, ಹಿರೇಬೂದಿಹಾಳ, 31ರಂದು ಬೆಳ್ಳಿಗಟ್ಟಿ, ಹೊಸಕಟ್ಟಿ ಗ್ರಾಮಗಳಲ್ಲಿ ವಸ್ತು ಪ್ರದರ್ಶನ, ಚಲನಚಿತ್ರ, ಬೀದಿನಾಟಕ, ಸಂಗೀತ ಕಾರ್ಯಕ್ರಮಗಳು ಜರುಗುತ್ತವೆ ಎಂದು ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.