ಧಾರವಾಡ

ಕಾಲುಬಾಯಿ ರೋಗ: ಹತೋಟಿಗೆ ಕ್ರಮ

Published On :

ಹುಬ್ಬಳ್ಳಿ: ಪ್ರತಿ ವರ್ಷ ರಾಜ್ಯದಲ್ಲಿ ಜಾನುವಾರಿಗೆ ಕಾಡುವ ಕಾಲುಬಾಯಿ ರೋಗ ಈ ಬಾರಿ ಹೆಚ್ಚಾಗಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಕ್ಷಿರೋತ್ಪಾದನೆಯಲ್ಲಿ ಕುಸಿತ ಮತ್ತು ಜಾನುವಾರು ಸಾವಿನ ಸಂಖ್ಯೆ ಪ್ರಮಾಣ ಹೆಚ್ಚಾಗಿದೆ ಎಂದು ಪಶು ಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲುಬಾಯಿ ರೋಗ ನೆರೆಯ ಆಂಧ್ರಪ್ರದೇಶ, ಕೇರಳದಲ್ಲೂ ವ್ಯಾಪಕವಾಗಿದ್ದು, ಈ ರೋಗದ ಹತೋಟಿಗೆ ಲಸಿಕೆಯೊಂದೇ ಮಾರ್ಗ ಎಂದು ಹೇಳಿದರು.
ಕಾಲುಬಾಯಿ ರೋಗದ ತಡೆಗೆ ಲಸಿಕೆ ಹಾಕಿಸುವುದರಿಂದ ಕ್ಷಿರೋತ್ಪಾದನೆಯಲ್ಲಿ ಇಳಿಮುಖವಾಗುತ್ತದೆ ಎಂಬ ಮೂಢನಂಬಿಕೆ ರೈತರಲ್ಲಿದ್ದು, ಈ ಮೂಢನಂಬಿಕೆಯ ಪರಿಣಾಮವಾಗಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಮೃತಪಟ್ಟಿವೆ. ಕಾಲುಬಾಯಿ ರೋಗದಿಂದ ಮೃತಪಟ್ಟ ರಾಸುಗಳಿಗೆ ರು. 25 ಸಾವಿರ, ಎತ್ತುಗಳಿಗೆ ರು. 20 ಸಾವಿರ ಮತ್ತು ಕರುಗಳಿಗೆ ರು. 10 ಸಾವಿರ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ. ಆದರೆ, ಪಶುಸಂಗೋಪನಾ ಇಲಾಖೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಕೆಎಂಎಫ್ ಸಿಬ್ಬಂದಿ ನೆರವು ಪಡೆದು ಕಾಲುಬಾಯಿ ರೋಗದಿಂದ ಮೃತಪಟ್ಟ ರಾಸುಗಳ  ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.
ಧಾರವಾಡ ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕೆ ಹಾಕುವ ಕಾರ್ಯ ಶೇ. 80ರಷ್ಟು ಮುಗಿದಿದೆ. ಕಲಘಟಗಿ ತಾಲೂಕೊಂದರಲ್ಲಿಯೇ 13 ಜಾನುವಾರು ಕಾಲುಬಾಯಿ ರೋಗದಿಂದ ಮೃತಪಟ್ಟಿವೆ. ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಕಾಲುಬಾಯಿ ಲಸಿಕೆಯನ್ನು ಕಡ್ಡಾಯವಾಗಿ ಜಾನುವಾರಿಗೆ ಹಾಕಲಿದ್ದು, ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.