ಧಾರವಾಡ

ಹೆಗ್ಗಡೆಯವರ ಮೇಲಿನ ಅರೋಪ ಖಂಡನೀಯ

Published On :

ನವಲಗುಂದ: ವ್ಯವಸ್ಥಿತ ಷಡ್ಯಂತ್ರದ ಫಲವಾಗಿ ವಿರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ಮೇಲೆ ಅವಹೇಳನಕಾರಿ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ದಿಗಂಬರ ಜೈನ್ ಸಮಾಜ ಸೇವಾ ಸಂಘದ ಅಧ್ಯಕ್ಷ ವಿದ್ಯಾಧರ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಮಧ್ಯಾಹ್ನ ದಿಗಂಬರ ಜೈನ್ ಸಮಾಜ ಸೇವಾಸಂಘ, ವರ್ತಕರ ಸಂಘ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡ ಖಂಡನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹೆಗ್ಗಡೆಯವರ ಏಳಿಗೆ ಸಹಿಸದವರು ದಾಖಲೆಗಳಿಲ್ಲದೇ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸರ್ಕಾರ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗವಿಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸತೀಶ, ಮೇಲ್ವಿಚಾರಕ ಜಿ.ಎಚ್. ಗಿರೀಶ, ದೇವರಾಜ, ಪ್ರೇಮಾ, ವರ್ತಕರ ಸಂಘದ ಅಧ್ಯಕ್ಷ ಆರ್.ಎನ್. ಧಾರವಾಡ, ಎ.ಎಸ್. ಬಾಗಿ, ಶಂಕರ ಧಾರವಾಡ, ಶ್ರೀಧರ ಹೆಬಸೂರ, ಮರಿಗೌಡ ಪಾಟೀಲ, ನಮೀತ ಪಾಟೀಲ, ಮಹಾದೇವಿ ನಾಯ್ಕರ, ಅಪ್ಪಣ್ಣ ಹಿರಗಣ್ಣವರ, ಮಹಾಂತೇಶ ದಂಡಾವತಿಮಠ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.