ಧೂಳಿನಿಂದ ಕೂಡಿದ ರಸ್ತೆ ದುರಸ್ತಿಗಾಗಿ ಪ್ರತಿಭಟನೆ
ಹುಬ್ಬಳ್ಳಿ: ಒಳಚರಂಡಿ ನಿರ್ಮಾಣ ಕಾಮಗಾರಿ ಸಮಯದಲ್ಲಿ ಅಗೆದ ರಸ್ತೆಗಳಿಂದ ಏಳುತ್ತಿರುವ ಧೂಳಿನಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತಿದ್ದು, ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿ ಗಜಾನನ ಮಹಾಮಂಡಳ ಅಧ್ಯಕ್ಷ ಡಿ. ಗೋವಿಂದರಾವ್ ನೇತೃತ್ವದಲ್ಲಿ ಮಂಗಳವಾರ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಲಾಯಿತು.
ರೈಲು ನಿಲ್ದಾಣ ರಸ್ತೆ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಒಳಚರಂಡಿ ನಿರ್ಮಾಣಕ್ಕೆ ರಸ್ತೆಗಳನ್ನು ಅಗೆಯಲಾಗಿದೆ. ಒಳಚರಂಡಿ ಪೈಪ್ಗಳನ್ನು ಹಾಕಿ ತಿಂಗಳಾದರೂ ರಸ್ತೆ ದುರಸ್ತಿ ಕೆಲಸ ಕೈಗೆತ್ತಿಕೊಂಡಿಲ್ಲ. ವಾಹನ ಸಂಚಾರದಿಂದ ಈ ಪ್ರದೇಶದಲ್ಲಿ ಉಂಟಾಗುತ್ತಿರುವ ಧೂಳಿನ ವಾತಾವರಣದಿಂದ ವ್ಯಾಪಾರ ವಹಿವಾಟು ಕುಸಿದಿದೆ. ಅಂಗಡಿಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಲ್ಲಿ ಅಲರ್ಜಿ, ಕೆಮ್ಮು ಮುಂತಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ನೆನಗುದಿಗೆ ಬಿದ್ದ ರಸ್ತೆ ದುರಸ್ತಿ ಕೆಲಸವನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

