28ರಂದು ರೈತರ ಸಮಾವೇಶ
ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಅ. 28ರಂದು ಮಧ್ಯಾಹ್ನ ಬೆಂಗಳೂರಿನ ಫ್ರಿಡಂ ಪಾರ್ಕ್ನಲ್ಲಿ ನಡೆಯಲಿರುವ ರೈತರ ಬೃಹತ್ ಸಮಾವೇಶಕ್ಕೆ ಧಾರವಾಡದಿಂದ 800 ಜನ ರೈತರು ಭಾಗವಹಿಸಲಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶಿವನಗೌಡ ಪಾಟೀಲ, ಕಬ್ಬು ಬೆಳೆಗಾರರಿಗೆ ಸೂಕ್ತ ಬೆಲೆ, ವಿದ್ಯುತ್ ಸಮಸ್ಯೆ, ಸಾಲಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು. ಅಲ್ಲದೆ, ಈ ಮೂಲಕ ರೈತರ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಸದ್ಯ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಸಂಬಂಧ ಗಲ್ಫ್ ದೇಶಗಳ ಜೊತೆಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ಸಿದ್ದತೆ ನಡೆಸಿದೆ. ರೈತರ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಬೇಕಿದ್ದ ಸರ್ಕಾರ ಪರೋಕ್ಷವಾಗಿ ದೇಶದ ರೈತರನ್ನು ನಾಶ ಮಾಡುತ್ತಿದೆ. ಹಾಗಾಗಿ, ಈ ಸಮಾವೇಶದ ಮೂಲಕ ರೈತರ ಬೇಡಿಕೆಗಳನ್ನು ಆಗ್ರಹಿಸಲಾಗುತ್ತಿದೆ. ಅಲ್ಲದೆ, ಈ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುತ್ತಿದ್ದು, ಸರ್ಕಾರ ಇದಕ್ಕೂ ಜಗ್ಗದಿದ್ದರೆ, ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದರು.
ಕ್ಷೇತ್ರದತ್ತ ಗಮನ ಹರಿಸಲಿ: ಕ್ಷೇತ್ರದ ಅಭಿವೃದ್ಧಿಗೋಸ್ಕರ ಶಾಸಕರಾಗಿ ಆಯ್ಕೆಯಾದ ಸಚಿವ ಸಂತೋಷ ಲಾಡ್ ಅವರನ್ನು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬರೀ ದೆಹಲಿ-ಬೆಂಗಳೂರಿಗೆ ಅಡ್ಡಾಡುತ್ತಿದ್ದರೆ, ಇಲ್ಲಿ ಧಾರವಾಡ ಅವರ ಕಲಘಟಗಿ ಕ್ಷೇತ್ರದ ಜನತೆ ನಿತ್ಯ ಸಂಕಟ ಅನುಭವಿಸುತ್ತಿದ್ದಾರೆ. ಯಾವ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಅವರ ಗಣಿ ಆರೋಪ ಇರಲಿ, ಬಿಡಲಿ ಅವರು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕವಿಟ್ಟುಕೊಂಡು ಜನಸೇವೆ ಮಾಡಬೇಕಿರುವುದು ಅವರ ಕರ್ತವ್ಯ. ಅದರೆ, ಅದನ್ನು ಸಂತೋಷ ಲಾಡ್ ಮರೆತಿದ್ದಾರೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ನಾಗಪ್ಪ ಉಂಡಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಶಿವು ಬಡಿಗೇರ, ವಿರೂಪಾಕ್ಷ ರೇವಣ್ಣವರ, ಸುರೇಶ ಹಳಿಯಾಳ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

