ದೇಶ ಕಾಯುವಲ್ಲಿ ಕೇಂದ್ರ ಸರ್ಕಾರ ವಿಫಲ
ಧಾರವಾಡ: ದೇಶದ ಅಖಂಡತೆಗೆ ಧಕ್ಕೆ ತರುವ ಭಯೋತ್ಪಾದನೆ ಚಟುವಟಿಕೆಗಳು ನಿರಂತರವಾಗಿದ್ದರೂ ಅವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಇಲ್ಲಿನ ನೌಕರ ಭವನದಲ್ಲಿ ಗುರುವಾರ ನಡೆದ ಬಿಜೆಪಿ ಹು-ಧಾ ಪಶ್ಚಿಮ ಕ್ಷೇತ್ರದ ಬೂತ್ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾರತ-ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ನಿತ್ಯ ಪಾಕಿಸ್ತಾನಿಗಳ ಅಟ್ಟಹಾಸ ನಡೆಯುತ್ತಿದೆ. ಆದರೆ, ಪ್ರಧಾನಿಮಂತ್ರಿ ಮನಮೋಹನ ಸಿಂಗ್ ಹಾಗೂ ಸೋನಿಯಾ ಗಾಂಧಿ ಭಯೋತ್ಪಾದನೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆಡಳಿತದ ನಿಷ್ಕ್ರಿಯ ಪ್ರದರ್ಶಿಸುತ್ತಿದ್ದಾರೆ ಎಂದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನವೆಂಬರ್ 17ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರ, ಹಗರಣ ಹಾಗೂ ಆಡಳಿತದ ವೈಫಲ್ಯತೆಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಮೋದಿ ಅವರನ್ನು ಬೆಂಬಲಿಸಬೇಕಿದೆ ಎಂದರು.
ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಸಮರ್ಪಕ ನಿರ್ವಹಣೆಯಾಗುತ್ತಿಲ್ಲ. ಪೂರ್ವ ನಿಯೋಜನೆ ಇಲ್ಲದೇ ಜಾರಿ ಮಾಡಿರುವ ಕ್ಷೀರಭಾಗ್ಯ ಯೋಜನೆಯಲ್ಲಿಯೂ ಅನೇಕ ಗೊಂದಲಗಳಿವೆ. ತನ್ನ ಯೋಜನೆಗಳ ಬಗ್ಗೆ ಯಾವುದೇ ಆಡಳಿತ್ಮಾತಕ ಕಾಳಜಿ ತೋರುತ್ತಿಲ್ಲ. ಕಾಂಗ್ರೆಸ್ ಬರೀ ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಕಾಗೇರಿ ಆರೋಪಿಸಿದರು. ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ಸೀಮಾ ಮಸೂತಿ, ವೀರಭದ್ರಪ್ಪ ಹಾಲಹರವಿ ಮಾತನಾಡಿದರು. ಮಹಾನಗರ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ, ಬಿಜೆಪಿ ಮುಖಂಡರಾದ ವಿಜಯಾನಂದ ಶೆಟ್ಟಿ, ಸಂಜಯ ಕಪಟಕರ, ಪ್ರಕಾಶ ಗೋಡಬೋಲೆ, ರಂಗಾಬದ್ದಿ, ಬಸವರಾಜ ಬೆಣ್ಣಿ, ಕಲ್ಮೇಶ ಹಾವೇರಪೇಟ್, ಮೋಹನ ರಾಮದುರ್ಗ, ಕಲಂದರ ಮುಲ್ಲಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

