ಸಾರಿಗೆ ಸಂಸ್ಥೆಯ 5 ಬಸ್ ಜಪ್ತಿ
ಧಾರವಾಡ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿದೇಶಿ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಪರಿಹಾರ ಒದಗಿಸದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)ಯ ಐದು ಬಸ್ಗಳನ್ನು ನ್ಯಾಯಾಲಯ ಜಪ್ತಿ ಮಾಡಿದೆ.
ಫೆಬ್ರವರಿ 2, 2002ರಂದು ಅಂಕೋಲಾ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಇಂಗ್ಲೆಂಡ್ ನಿವಾಸಿ ಡೇವಿಡ್ ಬರೋಸ್ ಅವರಿಗೆ ನೀಡಬೇಕಿದ್ದ ಪರಿಹಾರ 1.13 ಕೋಟಿ ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಶುಕ್ರವಾರ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಐದು ಬಸ್ಗಳನ್ನು ಜಪ್ತಿ ಮಾಡಲಾಗಿದೆ. ಭಾರತ ಪ್ರವಾಸ ಕೈಗೊಂಡಿದ್ದ ಡೇವಿಡ್ ಮತ್ತರ ಪತ್ನಿ ವೆವೆನ್ ತಮ್ಮ ಕಾರಿನಲ್ಲಿ ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದರು. ಆಗ ಅಂಕೋಲಾ ಬಳಿ ಬಸ್ವೊಂದು ಬರೋಸ್ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಡೇವಿಡ್ ಮೃತಪಟ್ಟಿದ್ದರು. ಬಳಿಕ ಡೇವಿಡ್ ಪತ್ನಿ ವೆವೆನ್ ಧಾರವಾಡದ ಮೋಟಾರು ಅಪಘಾತ ಪರಿಹಾರ ಪ್ರಾಧಿಕಾರದಲ್ಲಿ ದಾವೆ ಹೂಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಡೇವಿಡ್ ಕುಟುಂಬಕ್ಕೆ 1.13 ಕೋಟಿ ಪರಿಹಾರ ನೀಡುವಂತೆ ಆದೇಶಿಸಿತ್ತು. ಪ್ರಾಧಿಕಾರದ ಆದೇಶ ಪ್ರಶ್ನಿಸಿ ಸಾರಿಗೆ ಸಂಸ್ಥೆಯು ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಸಹ ಪ್ರಾಧಿಕಾರದ ಆದೇಶವನ್ನೇ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗಲೂ ಅದೇ ತೀರ್ಪು ನೀಡಿತ್ತು. ಅಲ್ಲದೇ, ಪರಿಹಾರಕ್ಕೆ ಕಾಲಮಿತಿ ಗೊತ್ತುಪಡಿಸಿತ್ತು. ಆದರೆ ಸಂಸ್ಥೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿತ್ತು. ದೂರುದಾರರ ಪರವಾಗಿ ನಗರದ ನ್ಯಾಯವಾದಿ ಶಿವರಾಜ ಬೆಳ್ಳಕ್ಕಿ ವಕಾಲತ್ತು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

