ಅತ್ಯಾಚಾರ: ಆಟೋ ಚಾಲಕನ ಬಂಧನ
ಬಳ್ಳಾರಿ: ಇಪ್ಪತ್ತು ವರ್ಷದ ಯುವತಿಯೋರ್ವಳನ್ನು ಆಟೋ ಚಾಲಕನೋರ್ವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರ ಎಸಗಿ, ಆಕೆಯ ಬಳಿ ಇದ್ದ ಹಣ, ಇತರ ವಸ್ತುಗಳನ್ನು ದೋಚಿಕೊಂಡು ಹೋಗಿರುವ ಘಟನೆ ಶುಕ್ರವಾರ ಬೆಳಗ್ಗೆ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆಯ ಸೈದುಪುರ ಗ್ರಾಮದ ಸೀತಕ್ಕ (ಹೆಸರು ಬದಲಾಯಿಸಲಾಗಿದೆ) ಎಂಬಾಕೆ ಮೇಲೆಯೇ ಅತ್ಯಾಚಾರ ನಡೆದಿದೆ. ಕೆಲಸ ಹುಡುಕಿಕೊಂಡು ಬಳ್ಳಾರಿಗೆ ಈಕೆ ಬಂದಿದ್ದಳು. ಆದರೆ ಮನೆಗೆ ವಾಪಸ್ ಕರೆದಿರುವ ಹಿನ್ನೆಲೆಯಲ್ಲಿ ಊರಿಗೆ ಹೋಗಬೇಕೆಂದು ಹೊಸ ಬಸ್ ನಿಲ್ದಾಣದಲ್ಲಿ ಮಲಗಿಕೊಂಡು, ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಹೊಸ ಬಸ್ ನಿಲ್ದಾಣದಿಂದ ರೇಲ್ವೆ ನಿಲ್ದಾಣಕ್ಕೆ ತೆರಳಲು ಆಟೋ ರಿಕ್ಷಾದಲ್ಲಿ ಹೋಗಿದ್ದಾಳೆ. ಆಟೋ ಚಾಲಕನು ರೇಲ್ವೆ ನಿಲ್ದಾಣಕ್ಕೆ ಹೋಗದೆ, ವೇಗವಾಗಿ ನಗರದ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಯುವತಿ ಬಳಿಯಿದ್ದ ಮೊಬೈಲ್ ಹಾಗೂ ರು. 3000 ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿ ಬಳ್ಳಾರಿಯ ಬೆಳಗಲ್ ನಿವಾಸಿ ಸುರೇಂದ್ರ ನಾಯ್ಕ್ (19)ನನ್ನು ಬಳ್ಳಾರಿ ಗ್ರಾಮೀಣ ಠಾಣೆ ಪಿಎಸ್ಐ ಕೆ. ಹೊಸಕೇರಪ್ಪ ಬಂಧಿಸಿದ್ದಾರೆ. ಈ ಕುರಿತು ಇನ್ಸ್ಪೆಕ್ಟರ್ ಉಮೇಶ್ ಈಶ್ವರ ನಾಯಕ್ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಸುರೇಂದ್ರ ನಾಯ್ಕ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

