ಸುವರ್ಣ ಸೌಧದಲ್ಲಿ ಪ್ರಶಸ್ತಿ ವಿತರಿಸಲಿ
ಧಾರವಾಡ: ರಾಜ್ಯ ಸರ್ಕಾರ ಪ್ರತಿವರ್ಷ ವಿತರಿಸುವ ರಾಜ್ಯೋತ್ಸವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ವಿತರಿಸುತ್ತಿದ್ದು, ಇನ್ಮುಂದೆ ಬೆಳಗಾವಿ ಸುವರ್ಣ ಸೌಧದಲ್ಲಿ ನೀಡುವ ಪರಂಪರೆ ಪ್ರಾರಂಭಿಸಬೇಕು ಅಥವಾ 1 ವರ್ಷ ಬೆಂಗಳೂರು ಇನ್ನೊಂದು ವರ್ಷ ಬೆಳಗಾವಿಯಲ್ಲಿ ವಿತರಿಸಬೇಕೆಂದು ಹೈಕೋರ್ಟ್ ನ್ಯಾಯವಾದಿ ಕೆ.ಎಸ್. ಕೋರಿಶೆಟ್ಟರ್ ಆಗ್ರಹಿಸಿದ್ದಾರೆ.
ನಾಳೆ ವಿಚಾರ ಸಂಕಿರಣ
ಧಾರವಾಡ: ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ರಾಜ್ಯ ವಿಜ್ಞಾನ ಪರಿಷತ್ತು ಜಂಟಿಯಾಗಿ ಅ. 29ರಂದು ಕಾನೂನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಮಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಎಂ.ಐ. ಸವದತ್ತಿ ಉದ್ಘಾಟಿಸಲಿದ್ದು, ಕುವೆಂಪು ವಿವಿ ವಿಶ್ರಾಂತ ಕುಲಪತಿ ಪ್ರೊ. ಎಸ್.ಪಿ. ಹಿರೇಮಠ ಆಗಮಿಸುವರು. ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಎಸ್.ವಿ ಸಂಕನೂರ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಅಧ್ಯಕ್ಷತೆಯನ್ನು ಕಾನೂನು ವಿವಿ ಕುಲಪತಿ ಪ್ರೊ. ಟಿ.ಆರ್. ಸುಬ್ರಹ್ಮಣ್ಯ ವಹಿಸುವರು. ಜನರು ಮಾಟ-ಮಂತ್ರ ಕಂದಾಚಾರಗಳಿಗೆ ಮೊರೆ ಹೋಗಿ ಮೋಸ ಮತ್ತು ಶೋಷಣೆಗೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವಿಚಾರ ಸಂಕಿರಣ ನಡೆಯಲಿದೆ ಎಂದು ಕುಲಸಚಿವ ಡಾ. ಬಿ.ಎಸ್. ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ಕಳ್ಳತನ
ಧಾರವಾಡ: ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನವಾದ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಗರಗ ಗ್ರಾಮದ ಶಿವಾನಂದ ಈರಣ್ಣ ಸವದತ್ತಿ ಎಂಬುವರ ಹೀರೊ ಹೊಂಡಾ ಬೈಕ್ (ಕೆಎ-25,ಎಕ್ಸ್-9006) ಕಳೆದ ಅ. 22 ರಂದು ರಾತ್ರಿ ಕಳ್ಳತನವಾಗಿದೆ. ಗರಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

