ಧಾರವಾಡ

ರಾಜ್ಯದ ಅಲ್ಲಲ್ಲಿ ಭಾರಿ ಮಳೆ

Published On :

ಹುಬ್ಬಳ್ಳಿ: ರಾಜ್ಯದ ಕೆಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದ್ದು, ರಾಯಚೂರು ಜಿಲ್ಲೆ ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲೂ ಮಳೆ ಸುರಿದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಾಲೂಕಿನ ದುಂಡಶಿ ಹೋಬಳಿಯಲ್ಲಿ ಮೂರು ಮನೆಗಳ ಚಾವಣಿ ಕುಸಿದು ಬಿದ್ದಿದ್ದು, ಅದರಲ್ಲಿ ಒಂದು ಸಂಪೂರ್ಣ ಜಖಂಗೊಂಡಿದೆ. ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದ ಬಳಿ ನಿರ್ಮಿಸುತ್ತಿರುವ ಗುಡ್ಡದ ಮಲ್ಲಾಪುರ ಏತ ನೀರಾವರಿ ಕಾಲುವೆ ಕಿತ್ತುಹೋಗಿ ನೂರಾರು ಎಕರೆ ಬತ್ತದ ಪೈರು ನಾಶವಾಗಿದೆ. ಭಾರಿ ನಷ್ಟ ಸಂಭವಿಸಿದೆ. ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ಮಳೆಯ ರೌದ್ರಾವತಾರಕ್ಕೆ ಸಾಗರದಂತೆ ಹರಿದು ಬಂದ ಗುಡ್ಡದ ಮಲ್ಲಾಪುರ ಏತ ನೀರಾವರಿ ಕಾಲುವೆ ಭಾಗಶಃ ಹಾಳಾಗಿದೆ. ಉತ್ತರ ಕನ್ನಡದ ಕುಮಟಾದಲ್ಲೂ ಭಾನುವಾರ ಬೆಳಗಿನಿಂದ ಒಂದೇ ಸವನೆ ಮಳೆ ಸುರಿದಿದೆ. ಕೂಡ್ಲಿಗಿ ತಾಲೂಕಿಲ್ಲೂ ಭಾನುವಾರ ಮಧ್ಯಾಹ್ನ ಮಳೆ ಸುರಿದಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ಬಸ್ ನಿಲ್ದಾಣದಲ್ಲಿ ಮೊಣಕಾಲುವರೆಗೆ ನೀರು ನಿಂತು ಕೆರೆಯಂತಾಗಿತ್ತು.
ರಾಯಚೂರು ಜಿಲ್ಲೆಯ ಮುದಗಲ್ ಹಾಗೂ ಮಸ್ಕಿಯಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ. ಮುದಗಲ್‌ನ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತವಾಗಿತ್ತು. ಅದೇ ರೀತಿ, ಮಸ್ಕಿ ಪಟ್ಟಣದಲ್ಲೂ ಜೋರಾಗಿ ಮಳೆ ಸುರಿದಿದ್ದರಿಂದ ಸಂತೇ ಪ್ರದೇಶ ಕೆಸರುಗದ್ದೆಯಾಗಿ ಮಾರ್ಪಾಡುಗೊಂಡಿತ್ತು. ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.