ಧಾರವಾಡ

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Published On :

ಧಾರವಾಡ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2012ನೇ ಸಾಲಿಗೆ ಯುವ ಬರಹಗಾರರು ಕನ್ನಡದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ ಅಂದರೆ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಅನುವಾದ, ಪಠ್ಯಪುಸ್ತಕ ಮತ್ತು ಇತರೆ ಸಾಹಿತ್ಯದ ಪ್ರಕಾರಗಳಿಗೆ (ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು) ಹೊರತುಪಡಿಸಿ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನೊಳಗಿರಬೇಕು. ಅಲ್ಲದೆ, ವಯಸ್ಸಿನ ದಾಖಲಾತಿ ಬಗ್ಗೆ ಎಸ್‌ಎಸ್‌ಎಲ್‌ಸಿ ಅಥವಾ ಅಧಿಕೃತ ಜನ್ಮ ದಾಖಲಾತಿ ಪ್ರಮಾಣ ಪತ್ರ ಮತ್ತು ಇಲ್ಲಿ ವರೆಗೆ ಎಲ್ಲಿಯೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸಬೇಕು. ತಾವು ರಚಿಸಿರುವ ಚೊಚ್ಚಲ ಕೃತಿಯನ್ನು ಬೆರಳಚ್ಚು ಮಾಡಿಸಬೇಕು. ನವೆಂಬರ್ 22ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 080- 2248516 ಅಥವಾ 22017704ಗೆ ಸಂಪರ್ಕಿಸಬಹುದೆಂದು ಆಡಳಿತಾಧಿಕಾರಿ ಬಿ.ಎಚ್. ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.