ಧಾರವಾಡ

ಸಂಪರ್ಕವಿದ್ದರೆ ಗುಣಮಟ್ಟದ ಶಿಕ್ಷಣ

Published On :

ಹುಬ್ಬಳ್ಳಿ: ಎಂಬಿಎ ಶಿಕ್ಷಣ ಸಂಸ್ಥೆಗಳು ಉದ್ದಿಮೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದರೆ ಗುಣಮಟ್ಟದ ಮ್ಯಾನೇಜ್‌ಮೆಂಟ್ ಶಿಕ್ಷಣ ಕೊಡಲು ಸಾಧ್ಯವಾಗುತ್ತದೆ ಎಂದು ಡಾ. ಎ.ಬಿ. ಕಾಲಕುಂದ್ರಿಕರ ಹೇಳಿದರು.
ನಗರದ ಚೇತನ ಬಿಸಿನೆಸ್ ಸ್ಕೂಲ್‌ನಲ್ಲಿ ಶನಿವಾರ ಆಯೋಜಿಸಿದ್ದ 'ಸಿಪ್-2013' ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವರ್ಗಕೋಣೆಯಲ್ಲಿ ಕಲಿತಿದ್ದನ್ನು ವಾಸ್ತವಿಕ ಮತ್ತು ವ್ಯವಹಾರಿಕ ಕ್ಷೇತ್ರದಲ್ಲಿ ಉಪಯೋಗಿಸಬೇಕಾದರೆ ಉತ್ತಮ ಸಂವಹನ, ವಿಶ್ಲೇಷಣಾತ್ಮಕ ಮತ್ತು ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಕಂಡುಹಿಡಿಯುವ ಸಾಮರ್ಥ್ಯ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದರು. ಸಂವಹನಾ ಕೌಶಲ್ಯ ಬೆಳೆಸಿಕೊಳ್ಳಲು ಹೆಚ್ಚು ಓದಬೇಕು. ವಿಶ್ಲೇಷಣಾ ಕೌಶಲ್ಯಕ್ಕಾಗಿ ಹೆಚ್ಚಿಸಿಕೊಳ್ಳಲು ಪ್ರಕರಣಗಳ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ದ್ಯಾವಪ್ಪನವರ-ಕೊರವಿ-ಸಿದ್ನಾಲ ಎಜ್ಯುಕೇಶನ್ ಟ್ರಸ್ಟ್‌ನ ನಿರ್ದೇಶಕ ಡಾ.ವಿ.ಎಂ. ಕೊರವಿ ಮಾತನಾಡಿ, ಕಂಪನಿಗಳು ಸಿಪ್ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪ್ರೋತ್ಸಾಹ, ಉತ್ಪಾದನೆ, ಮಾರುಕಟ್ಟೆ ಹಾಗೂ ಇನ್ನಿತರ ವಿಷಯಗಳಲ್ಲಿ ಮಾಹಿತಿ ಒದಗಿಸಬೇಕು ಎಂದರು. ಪ್ರೊ. ಸುಚಿತ್ರಾ ಹೂಲಿ, ಸಿಪ್ ತರಬೇತಿಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ಸಾಧನೆ ಹಾಗೂ ಅವಕಾಶ ನೀಡಿದ್ದ ಕಂಪನಿಗಳ ಬಗ್ಗೆ ಮಾಹಿತಿ ನೀಡಿದರು. ಸಿಪ್ ತರಬೇತಿಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಅನುಭವ ಹಂಚಿಕೊಂಡರು. ಅಮೂಲ್ಯ ಪ್ರಾರ್ಥಿಸಿದರು. ಪ್ರೊ. ವಾಸನದ ಸ್ವಾಗತಿಸಿದರು. ಪ್ರೊ. ಸಂತೋಷ ಜವಳಿ ಪರಿಚಯಿಸಿದರು. ಪ್ರೊ. ಡೆನ್ನಿಸ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.