ಧಾರವಾಡ

ಕೊಠಡಿಗಳ ನಿರ್ಮಾಣಕ್ಕೆ ಅಡಿಗಲ್ಲು

Published On :

ಹುಬ್ಬಳ್ಳಿ: ಇಲ್ಲಿಯ ಬಿಡನಾಳದ ಆರ್.ಕೆ. ಪಾಟೀಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆರ್‌ಎಂಎಸ್‌ಎ ಯೋಜನೆಯಡಿ ಸುಮಾರು ರು. 45.97 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಐದು ಕೊಠಡಿಗಳ ಅಡಿಗಲ್ಲು ಸಮಾರಂಭವನ್ನು ಶಾಸಕ ಪ್ರಸಾದ ಅಬ್ಬಯ್ಯ ಬುಧವಾರ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ತಮ್ಮ ಅನುದಾನದ ಬಹುಪಾಲನ್ನು ನಗರದ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತಿರುವುದಾಗಿ ತಿಳಿಸಿದರು.
ಪ್ರಸಕ್ತ ವರ್ಷದ ಅನುದಾನದಲ್ಲಿ ಈ ಶಾಲೆಯ 631 ಚದುರ ಮೀಟರ್ ಆವರಣಕ್ಕೆ ಟೈಲ್ಸ್ ಜೋಡಿಸಲಾಗುವುದು. ಇದಕ್ಕಾಗಿ ರು. 2 ಲಕ್ಷ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಎಸ್‌ಡಿಎಂಸಿ ಉಪಾಧ್ಯಕ್ಷ ಶೈಲಜಾ ಭದ್ರಾಪುರ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯೆ ಲಕ್ಷ್ಮೀ ಜಾಧವ, ಮಂಜುನಾಥ ಚಿಂತಗಿಂಜಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಮಣಕೂರ ಇದ್ದರು. ಪಾಲಿಕೆ ಮಾಜಿ ಸದಸ್ಯ ಮೋಹನ ಅಸುಂಡಿ ಪ್ರಾಸ್ತಾವಿಕ ಮಾತನಾಡಿದರು.
ಎಸ್‌ಡಿಎಂಸಿ ಸದಸ್ಯೆ ಸುಧಾ ಜಂಗಮನಿ, ಮಲ್ಲಪ್ಪ ಕುರಿ, ಸಿದ್ರಾಮಪ್ಪ ಆಲದಿ, ಯಲ್ಲಪ್ಪಗೌಡ ಪಾಟೀಲ, ಬಸವರಾಜ ಹಳ್ಯಾಳ, ಮಹಾದೇವಿ ಕಂದಾರೆ, ಶರೀಫಸಾಬ ನದಾಫ, ವೀರಭದ್ರಪ್ಪ ಮೇಟಿ ಮತ್ತಿತರರು ಇದ್ದರು. ಮುಖ್ಯ ಶಿಕ್ಷಕ ಟಿ.ಆರ್. ಶಿರೋಳ ಸ್ವಾಗತಿಸಿದರು. ಎಚ್.ಎಂ. ಉಪನಾಳ ನಿರೂಪಿಸಿದರು. ಆರ್.ಎಸ್. ಸಂಗದೇವರಕೊಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.