ಧಾರವಾಡ

ಬಳ್ಳಾರಿ ವಿವಿ ಕುಲಪತಿ ಮಂಜಪ್ಪ ಹೊಸಮನೆ ಅರ್ಜಿ ವಜಾ

Published On :

ಧಾರವಾಡ: ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಸಚಿವರ ಹುದ್ದೆ ವಿವಾದಕ್ಕೆ ಸಂಬಂಧಿಸಿದಂತೆ ಕುಲಪತಿ ಮಂಜಪ್ಪ ಹೊಸಮನೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಗುರುವಾರ ಹೈಕೋರ್ಟ್ ಪೀಠ ವಜಾಗೊಳಿಸಿದೆ. ರಾಜ್ಯ ಸರ್ಕಾರ ವಿಜಯಕುಮಾರ ಅವರನ್ನು ಕುಲಸಚಿವ ಹುದ್ದೆಗೆ ನೇಮಕ ಮಾಡಿತ್ತು. ಆದರೆ, ಕುಲಪತಿ ಮತ್ತು ಕುಲಸಚಿವರ ಮಧ್ಯೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಕುಲಪತಿಗಳು ಕುಲಸಚಿವರನ್ನು ವಜಾಗೊಳಿಸಿದ್ದರು. ಅಲ್ಲದೇ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಈ ಹಿನ್ನೆಲೆ ಕುಲಸಚಿವರು ಕಾರ್ಯ ನಿರ್ವಹಿಸಲು ಅನವು ಮಾಡಿಕೊಡಲು ಸರ್ಕಾರ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಕುಲಪತಿ ಡಾ. ಮಂಜಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಅಶೋಕ ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠ, ಕುಲಸಚಿವರನ್ನು ವಜಾಗೊಳಿಸಲು ಕುಲಪತಿಗಳಿಗೆ ಅಧಿಕಾರವಿಲ್ಲ. ಇದು ಸರ್ಕಾರಕ್ಕೆ ಸಂಬಂಧಿಸಿದ್ದು ಎಂದು ಅರ್ಜಿ ವಜಾ ಮಾಡಿತು. ಕುಲಸಚಿವರ ಪರ ವಕೀಲರಾದ ಆರ್.ಎಂ. ಜಾವೇದ್, ಕಾಶಿನಾಥ ವಾದ ಮಂಡಿಸಿದರೆ, ಸರ್ಕಾರದ ಪರ ಕೆ.ಎಸ್. ಪಾಟೀಲ ವಾದ ಮಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.