ಧಾರವಾಡ

ಪಡಿತರ ಚೀಟಿ: ಮಧ್ಯವರ್ತಿಗಳ ಹಾವಳಿಗೆ ನಿವಾಸಿಗಳ ಆಕ್ರೋಶ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಸೆ. 7
ಪಡಿತರ ಚೀಟಿ ವಿತರಣೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಹೀಗಾಗಿ ಹೆಗ್ಗೇರಿ ಸ್ಲಂ ನಿವಾಸಿಗಳಿಗೆ ಪಡಿತರ ಚೀಟಿ ದೊರೆಯುತ್ತಿಲ್ಲ ಎಂದು ಆರೋಪಿಸಿ ಹೆಗ್ಗೇರಿ ಸ್ಲಂ ನಿವಾಸಿಗಳು ಶನಿವಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಮಾರುತಿ ನಗರ ಮತ್ತು ಹೆಗ್ಗೇರಿ ಸ್ಲಂ ಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು 700ಕ್ಕೂ ಹೆಚ್ಚು ಬಡ ಕುಟುಂಬಗಳಿವೆ. ಆದರೆ, 400 ಕುಟುಂಬಗಳಿಗೆ ಮಾತ್ರ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆಹಾರ ಇಲಾಖೆಯ ಕೆಲವು ಅಧಿಕಾರಿಗಳು ಮತ್ತು ಮಧ್ಯವರ್ತಿಗಳು ಮನೆ ಮನೆಗೆ ಬಂದು ನಿಮ್ಮ ಪಡಿತರ ಚೀಟಿ ಸಿದ್ಧವಾಗಿದ್ದು, ರು. 500 ನೀಡಿದರೆ ಪಡಿತರ ಚೀಟಿ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಮಾರುತಿ ನಗರ ಮತ್ತು ಹೆಗ್ಗೇರಿಗಳಲ್ಲಿ ಪಡಿತರ ವಿತರಣೆಯಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿದೆ. ಹೆಗ್ಗೇರಿಯಿಂದ 3-4 ಕಿ.ಮೀ. ದೂರ ಇರುವ ಪಡಿತರ ಅಂಗಡಿಗಳಲ್ಲಿ ಪಡಿತರ ಧಾನ್ಯ ವಿತರಿಸಲಾಗುತ್ತಿರುವುದರಿಂದ ಸಾಕಷ್ಟು ಫಲಾನುಭವಿಗಳು ಪಡಿತರ ದೊರೆಯದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಮಂಗಲಾ, ಶಿವರುದ್ರಪ್ಪ ಬಡಿಗೇರ, ವೆಂಕಟೇಶ ದಾಸರ, ಬಲಭೀಮ ಪೊದ್ದಾರ್, ಭಾಸ್ಕರ ಪೂಜಾರಿ, ನಿರ್ಮಲಾ ಹಂಚಿನಾಳ, ಎಸ್.ಡಿ. ಬಡಿಗೇರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.