ಧಾರವಾಡ

ಹೈಕೋರ್ಟ್‌ನಲ್ಲಿ ನ್ಯಾಯ ಕ್ಲಿನಿಕ್ ಸ್ಥಾಪನೆ

Published On :

ಧಾರವಾಡ: ಕಾನೂನು ಪ್ರಾಧಿಕಾರವು ಅರ್ಹರಿಗೆ ಉಚಿತವಾಗಿ ಕಾನೂನು ಸೇವಾ ಸೌಲಭ್ಯ ನೀಡುತ್ತಿದ್ದು, ಬರುವ ದಿನಗಳಲ್ಲಿ ಧಾರವಾಡದ ಹೈಕೋರ್ಟ್ ಪೀಠದಲ್ಲಿ ನ್ಯಾಯ ಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಹಾಗೂ  ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಹೇಳಿದರು.
ಸಮೀಪದ ಹೈಕೋರ್ಟ್ ಸಭಾಂಗಣದಲ್ಲಿ ಶನಿವಾರ ನಡೆದ ಎಸ್ಸಿ-ಎಸ್ಟಿ ಸಮುದಾಯದವರಿಗೆ ಕಾನೂನು ಅರಿವು ಹಾಗೂ ಇಲಾಖಾ ಯೋಜನೆಗಳ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ಜನತೆ ಅನ್ಯಾಯಕ್ಕೆ ಒಳಗಾಗಿದ್ದರೂ ಕಾನೂನಿನ ತಿಳಿವಳಿಕೆ ಕೊರತೆ ಹಾಗೂ ಆರ್ಥಿಕ ಅಡಚಣೆಯಿಂದ ನ್ಯಾಯಾಲಯಕ್ಕೆ ಬರುವುದಿಲ್ಲ. ಹೈಕೋರ್ಟ್‌ನಲ್ಲಿ ನ್ಯಾಯ ಕ್ಲಿನಿಕ್ ಹೆಸರಿನಲ್ಲಿ ಒಂದು ಕೇಂದ್ರ ಆರಂಭಿಸಿ ಈ ಮೂಲಕ ನ್ಯಾಯ ಕೇಳಿ ಬಂದವರಿಗೆ ನ್ಯಾಯ ಒದಗಿಸಿಕೊಡುವ ಯೋಜನೆ ಹಾಕಲಾಗುತ್ತಿದೆ ಎಂದರು.
ಕಾರ್ಯಾಗಾರದಲ್ಲಿ ಪಿಡಿಸಿಎಲ್ ಆಕ್ಟ್ 1998ರ ಕುರಿತು ನ್ಯಾಯಾವಾದಿಗಳಾದ ಬಸವಪ್ರಭು ಹೊಸಕೇರಿ, ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಅಶೋಕ ಚಲವಾದಿ ಮತ್ತು ಡಾ. ಅಂಬೇಡ್ಕರ ಅಭಿವೃದ್ಧಿ ನಿಗಮದ ಸೌಲಭ್ಯಗಳ ಕುರಿತು ಜಿಲ್ಲಾ ವ್ಯವಸ್ಥಾಪಕ ಎ.ಬಿ. ಜಂಗಣ್ಣವರ ಮಾಹಿತಿ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಬಿ.ಡಿ. ಹಿರೇಮಠ ಇದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಲೋಕೇಶಕುಮಾರ ಅಧ್ಯಕ್ಷತೆ ವಹಿಸಿದ್ದರು.
ಚಿತ್ರಳ್ಳಿ ಶ್ರೀನಿವಾಸ ಪ್ರಾರ್ಥಿಸಿದರು. ಕಾನೂನು ಸೇವೆಗಳ ಸಮಿತಿ ಸಹಾಯಕ ವಿಲೇಖನಾಧಿಕಾರಿಗಳಾದ ಮಂಜುನಾಥ ಮೋಗೆರಾ ಸ್ವಾಗತಿಸಿದರು. ಶಿವಕುಮಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.