ಧಾರವಾಡ

ಸೋಲು-ಗೆಲುವು ಸಮನಾಗಿ ಸ್ವೀಕರಿಸಿ

Published On :

ಶಿಗ್ಗಾಂವಿ: ಜೀವನದ ಸೋಲು-ಗೆಲವುಗಳನ್ನು ಸಮಚಿತ್ತದಿಂದ ಸ್ವೀಕರಿಸಿ, ಸಾಮರ್ಥ್ಯವನ್ನು ಉತ್ತಮಪಡಿಸಿಕೊಂಡು ಉದಾತ್ತ ಜೀವನ ಸಾಗಿಸಲು ಕ್ರೀಡೆ ತುಂಬಾ ಸಹಕಾರಿ ಎಂದು ಶ್ರೀ ಚನ್ನಬಸವೇಶ್ವರ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷೆ ಸ್ನೇಹಲತಾ ಎಂ. ಕುನ್ನೂರ ಹೇಳಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಚನ್ನಪ್ಪ ಕುನ್ನೂರ ಕಾಲೇಜಿನ ಆಶ್ರಯದಲ್ಲಿ ನಡೆದ ಶಿಗ್ಗಾಂವಿ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಅವರು, ಕಬಡ್ಡಿ ಖೋಖೋ ಮೊದಲಾದ ಗ್ರಾಮೀಣ ಕ್ರೀಡೆಗಳ ಬಗ್ಗೆ ವಿದ್ಯಾರ್ಥಿಗಳ ಒಲವು ಕಡಿಮೆಯಾಗುತ್ತಿದ್ದು, ಸರ್ಕಾರ ಈ ಕ್ರೀಡೆಗಳನ್ನು ಪ್ರೋತ್ಸಾಹಿಸಿ, ಉಳಿಸಬೇಕೆಂದರು. ಕಲಿಕೆಯ ಹಂಬಲ ಪಠ್ಯ ವಿಷಯಗಳಿಗೆ ಮಾತ್ರ ಸೀಮಿತವಾಗದಿರಲಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಸ್ನೇಹಲತಾ, ಕ್ರೀಡೆ, ಯೋಗ ಹಾಗೂ ಧ್ಯಾನದ ಮೂಲಕ ದೈಹಿಕ-ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ರಂಭಾಪುರಿ ಕಾಲೇಜಿನ ಆಡಳಿತಾಧಿಕಾರಿ ಎಸ್.ವಿ. ಕಂಬಾಳಿಮಠ, ಪದವಿಪೂರ್ವ ಹಂತ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸುವ ಅಗತ್ಯವಿದೆ ಎಂದರು. ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ರಂಭಾಪುರಿ ಕಾಲೇಜಿನ ಪ್ರಾಚಾರ್ಯ ಎಸ್.ವಿ. ಕುಲಕರ್ಣಿ ಮಾತನಾಡಿದರು ಎಚ್.ಎಸ್. ಹಲಸೂರ, ಶ್ರೀ ಚನ್ನಪ್ಪ ಕುನ್ನೂರ ಆಂಗ್ಲ ಮಾಧ್ಯಮ ಶಾಲೆಯ ಎ.ಪಿ. ಕನವಳ್ಳಿ, ಸಿ.ಬಿ. ಕುನ್ನೂರ ಇದ್ದರು. ಕೆ. ಬಸಣ್ಣ ಸ್ವಾಗತಿಸಿದರು. ಎಂ.ಎನ್. ಪ್ರಕಾಶ ಪ್ರತಿಜ್ಞಾವಿಧಿ ಬೋಧಿಸಿದರು. ಕೆ.ಸಿ. ಹೂಗಾರ ನಿರೂಪಿಸಿದರು. ಕೆ.ಎಸ್. ಬರದೆಲಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.