ಈಗ್ಲಾದ್ರೂ ರಿಕ್ರಿಯೇಷನ್ ಕ್ಲಬ್ಗೆ ರಾಜಿನಾಮೆ ನೀಡಿ
ಹುಬ್ಬಳ್ಳಿ: ಜನರ ಹಿತ ಕಾಯುವಲ್ಲಿ ವಿಫಲವಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಈಗಲಾದರೂ ಎಚ್ಚೆತ್ತುಕೊಂಡು ರಿಕ್ರಿಯೇಷನ್ ಕ್ಲಬ್ನ ಗೌರವಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ನಾಡೋಜ ಪಾಟೀಲ ಪುಟ್ಟಪ್ಪ ಹೇಳಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹುಬ್ಬಳ್ಳಿ ಜಿಮಖಾನಾ ಮೈದಾನ ಮುಕ್ತವಾಗುವವರೆಗೆ ಹೋರಾಟ ನಿಲ್ಲದು. ಹೋರಾಟ 40ನೇ ದಿನಕ್ಕೆ ಕಾಲಿಟ್ಟರೂ ಸರ್ಕಾರ ಜಿಮಖಾನಾಕ್ಕೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುವಲ್ಲಿ ಮೀನಮೇಷ ಎಣಿಸುತ್ತಿದೆ ಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೋರಾಟವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದರು.
ಮಾಜಿ ಸಿಎಂ ಜಗದೀಶ ಶೆಟ್ಟರ್ ಮತ್ತು ಸಂಸದ ಪ್ರಹ್ಲಾದ ಜೋಶಿ ಅವರ ಕೃಪಾಕಟಾಕ್ಷವಿಲ್ಲದೇ ಮೈದಾನ ಕಬಳಿಸುವ ಹುನ್ನಾರ ನಡೆಯುತ್ತಿರಲಿಲ್ಲ ಎಂದರು.
ಮುಂದಿನ ಹೋರಾಟದ ರೂಪುರೇಷೆಗಳನ್ನು ಇನ್ನು ಒಂದು-ಎರಡು ದಿನಗಳಲ್ಲಿ ರೂಪಿಸಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಸಿಬಿಎಲ್ ಹೆಗ್ಡೆ, ಕಾಡಯ್ಯ ಹಿರೇಮಠ, ಅಮೃತ ಇಜಾರೆ, ಶರದ್ ಭಗತ್, ಬಿ.ಡಿ. ಹೆಗ್ಡೆ, ಎನ್.ಎಸ್. ನಾಡಗೇರ, ಮನೋಜ ಹಾನಗಲ್, ಅರವಿಂದ ಮೇಟಿ, ಮೋಹನ ಹೊಸಮನಿ, ದೀಪಕ ಶಿರೋಳಕರ್, ವಿನಾಯಕ ಶಿರಾಳಕರ್ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

