ಬಾಲಕರ ಶವವಿಟ್ಟು ಪ್ರತಿಭಟನೆ
ಧಾರವಾಡ: ಗಣೇಶ ವಿಗ್ರಹಗಳನ್ನು ವಿಸರ್ಜಿಸಲು ತೋಡಿದ್ದ ಗುಂಡಿಯಲ್ಲಿ ಬಿದ್ದು ಶನಿವಾರ ಮೃತಪಟ್ಟ ಇಬ್ಬರು ಬಾಲಕರ ಮೃತದೇಹಗಳನ್ನಿಟ್ಟು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪಾಲಕರು ಸೇರಿದಂತೆ ಸಾರ್ವಜನಿಕರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಗುಂಡಿ ತೋಡಲು ಕಾರಣರಾದವರನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಮೃತ ಬಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೃತಪಟ್ಟ ಬಾಲಕರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಹಾಗೂ ಮತ್ತೆ ಇಂತಹ ಘಟನೆಗಳು ಮರುಕಳಿಸದಿರಲು ಪೊಲೀಸರು ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಪಾಲಕರು ಹಾಗೂ ಸಾರ್ವಜನಿಕರು ನೀಡಿದರು. ನಂತರ ಆಗಮಿಸಿದ ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ ಹಾಗೂ ತಹಸೀಲ್ದಾರ್ ಎಸ್.ಎಸ್. ಬಳ್ಳಾರಿ ಬಾಲಕರ ಮೃತ ದೇಹಗಳ ಅಂತ್ಯಸಂಸ್ಕಾರಕ್ಕಾಗಿ ಸ್ಥಳದಲ್ಲಿಯೇ ಒಂದು ಸಾವಿರ ರುಪಾಯಿ ಚೆಕ್ ನೀಡಿ ಘಟನೆಗೆ ಕಾರಣರಾದವರನ್ನು ಬಂಧಿಸಲಾಗುವುದು. ಅಲ್ಲದೇ ಇಂತಹ ಘಟನೆ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಪರಿಹಾರ ನೀಡಲು ಅವಕಾಶವಿರುವುದಿಲ್ಲ. ಆದರೂ ಸಹಿತ ಈ ಘಟನೆಯ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು. ಈ ಕಾರಣದಿಂದ ಪ್ರತಿಭಟನೆ ಹಿಂಪಡೆಯಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

